ಕುಂದಾಪುರ: ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಡ್ತಿ (60) ಸಾವನ್ನಪ್ಪಿದ ದಂಪತಿ.
ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಕಾರು ಸಂಚರಿಸುತ್ತಿತ್ತು ಎನ್ನಲಾಗಿದ್ದು, ಕುಂದಾಪುರದ ಇವರ ಸಂಬಂಧಿಕರ ಮೆನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಅವಘಡ ಸಂಭವಿಸಿದೆ.
ಇನ್ನು ಘಟನೆಯಿಂದ ಮಹಾಬಲ ಶೆಟ್ಟಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಸರೋಜಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.
ಕಾರು ಚಾಲಕ ಮಂಜುನಾಥ ಅವರ ವಿರುದ್ಧ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…