ಕುಂದಾಪುರ : ಕಾರು ಪಲ್ಟಿ ; ಚಾಲಕ ಸೇರಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ – vishwanews24

ಉಡುಪಿ

ಕುಂದಾಪುರ : ಕಾರು ಪಲ್ಟಿ ‘ ಚಾಲಕ ಸೇರಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ತೆಕ್ಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಎಂಬಲ್ಲಿ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರು ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ :

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ, ಕೊಲೆ  ಪ್ರಕರಣ : ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸಿದ ಹೈಕೋರ್ಟ್  – vishwanews24

ಒಟ್ಟು 12 ಮಂದಿ ವಿದ್ಯಾರ್ಥಿಗಳು ಜ.31ರಂದು ಎರಡು ಕಾರುಗಳಲ್ಲಿ ದೇಶ ಸುತ್ತುವ ಪ್ರವಾಸಕ್ಕೆ ಹೊರಟಿದ್ದರು. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಮಧ್ಯಾಹ್ನದ ವೇಳೆಗೆ ತೆಕ್ಕಟ್ಟೆ ಸಮೀಪದ ಕನ್ನುಕೆರೆ ಪ್ರದೇಶದಲ್ಲಿ ಕಾರು ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಕಾರು ಪಲ್ಟಿ ಹೊಡೆದು ಬಿದ್ದಿದೆ. ಅಪಘಾತ ಸಂಭವಿಸಿದ ವೇಳೆಗೆ ಕಾರಿನಲ್ಲಿ ಚಾಲಕ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದ್ದಾರೆ.

ಇದನ್ನೂ ಓದಿ :

ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ – vishwanews24

ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply