ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

Featured, ಉಡುಪಿ

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ

ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯಿಂದ ನೀಡುವ ಸ್ಮಾರ್ಟ್ ಕಾರ್ಡ್ ಅನ್ನು ಬಾಕಿ ಉಳಿದ ಕಾರ್ಮಿಕರಿಗೂ ನೀಡುವಂತೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರು ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಫಹಿಮ್ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

ಉಡುಪಿಯಲ್ಲಿ ಕಾರ್ಯಕ್ರಮದ ಮುಖಾಂತರ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದ್ದು, ಆ ದಿನ ಕೆಲವು ಕಾರ್ಮಿಕರಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ದೊರೆತಿದೆ. ಸ್ಮಾರ್ಟ್ ಕಾರ್ಡ್ ದೊರಕದಿರುವ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರಿಗೆ ತುರ್ತಾಗಿ ಸ್ಮಾರ್ಟ್ ಕಾರ್ಡ್ ಅನ್ನು
ಒದಗಿಸುವಂತೆ ಶಾಸಕರು ಮನವಿ ಮಾಡಿಕೊಂಡರು.

ಇದನ್ನೂ ಓದಿ:

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

Leave a Reply