ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಾ ಬೆಟ್ಟು, ಉಪ್ಪಿನಕುದ್ರು ಗ್ರಾಮದ ನಿವಾಸಿ ಸುಹಾಸ್ (23) ಜುಲೈ 13ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಬಳಿಕ ಅವರು ಮನೆಗೆ ಮರಳಿಲ್ಲ ಎಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ಮೊದಲು ಸಂಬಂಧಿಕರು ಹಾಗೂ ಸ್ನೇಹಿತರಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ತಡವಾಗಿ ದೂರು ದಾಖಲಿಸಲಾಗಿದೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
5 ಅಡಿ 9 ಇಂಚು ಎತ್ತರವಿದ್ದು,ನೇರಳೆ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಯುವಕನ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…