ಕುಂದಾಪುರ : ಕಾಲೇಜು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ – vishwanews24
ಹಿಜಬ್ ವಿವಾದ : ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ
ಉಡುಪಿ: ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾದ ಪ್ರಾಂಶುಪಾಲನಿಗೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿಗೆ ಆಕ್ಷೇಪ ವ್ಯಕ್ತವಾಗಿದ್ದು, ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.
ಇಂದು (ಸೆ.5) ಶಿಕ್ಷಕರ ದಿನಾಚರಣೆ ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ನೀಡುವ ಕುರಿತು ಸರ್ಕಾರ ತಡೆ ಹಿಡಿದಿದೆ.
ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿರುವಾಗ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಇದಕ್ಕೆ ತಡೆ ನೀಡಿದೆ.
ಏನಿದರ ಹಿನ್ನೆಲೆ:
ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದ್ದು, ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದರು. ಆ ಫೋಟೊ ವೈರಲ್ ಆಗಿತ್ತು. ಪ್ರಾಂಶುಪಾಲರ ಪ್ರಶಸ್ತಿ ಹಿಂಪಡೆಯುವಂತೆ ಕೆಲ ಪ್ರಗತಿಪರರು ಒತ್ತಡ ಹಾಕಿದ್ದರು. ಒತ್ತಡಕ್ಕೆ ಮಣಿದ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.
