Featured

ಕುಂದಾಪುರ: ಕಾಸರಗೋಡು ಇಕೋ  ಬೀಚ್ ಬಳಿ ಆತ್ಮಹತ್ಯೆಗೆ ಶರಣಾದ ಕಾನ್‌ಸ್ಟೇಬಲ್  – Vishwanews24

ಕುಂದಾಪುರ: ಕಾಸರಗೋಡು ಇಕೋ  ಬೀಚ್ ಬಳಿ ಆತ್ಮಹತ್ಯೆಗೆ ಶರಣಾದ ಕಾನ್‌ಸ್ಟೇಬಲ್

ಕುಂದಾಪುರ : ಕುಂದಾಪುರ ನಗರ ಠಾಣೆಯ ಕಾನ್‌ಸ್ಟೇಬಲ್‌ವೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್‌ ಬಳಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಗೆ ಅನಾರೋಗ್ಯ ಅಥವಾ ಆನ್‌ಲೈನ್ ಬೆಟ್ಟಿಂಗ್‌ನಿಂದಾಗಿ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಎಂಬ ಶಂಕೆ ಮೂಡಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ನಾಡು ಮಾಸ್ಕೇರಿ ಗ್ರಾಮದ ನಾಗೇಶ ಗೌಡ ಅವರ ಪುತ್ರ ರಾಮ ಗೌಡ (32) ಆತ್ಮಹತ್ಯೆಗೆ ಶರಣಾದವರು. ಕಳೆದ 5 ವರ್ಷಗಳಿಂದ ಕುಂದಾಪುರ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿದ್ದರು. ಮಂಗಳವಾರ ಘಟನೆ ಬೆಳಕಿಗೆ ಬಂದಿದೆ.

ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳಿಗೆ ತಿಳಿಸದೆ ಫೆಬ್ರವರಿ 2ರಿಂದಲೇ ರಾಮ ಗೌಡ ಅವರು ಕೆಲಸಕ್ಕೆ ಗೈರು ಹಾಜರಾಗಿದ್ದರು. ಅಲ್ಲದೆ ಕಳೆದ ನಾಲ್ಕೈದು ದಿನಗಳಿಂದ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಮಂಗಳವಾರ ಬೆಳಗ್ಗೆ ಕಾಸರಗೋಡಿನ ಇಕೋ ಬೀಚ್ ಸನಿಹದಲ್ಲಿರುವ ಪಾರ್ಕ್ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇನ್ನು ಮೃತದೇಹದ ಬಳಿ ಬ್ಯಾಗ್ ಕೂಡಾ ಪತ್ತೆಯಾಗಿದೆ. ಸ್ಥಳಕ್ಕೆ ಕುಂದಾಪುರ ಎಸ್‌ಐ ಈರಯ್ಯ ಹಾಗೂ ಸಿಬಂದಿ ಭೇಟಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಯ್ಯ ಗೌಡ ಅವರು ಉತ್ತಮ ವಾಲಿಬಾಲ್ ಪಟುವಾಗಿದ್ದರು. ಕೆಲ ದಿನಗಳಿಂದ ಏಕಾಂಗಿಯಾಗಿರುತ್ತಿದ್ದ ಅವರಿಗೆ ಆರೋಗ್ಯ ಸಮಸ್ಯೆಯೂ ಕಾಡುತ್ತಿತ್ತು ಎನ್ನಲಾಗುತ್ತಿದೆ. ಇದಲ್ಲದೆ ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬ್ಯಾಂಕ್‌ಗಳಲ್ಲಿ ಸಾಲ ಮಾಡಿಕೊಂಡಿದ್ದರು ಎಂದೂ ಹೇಳಲಾಗುತ್ತಿದೆ. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ರಾಮ ಬರೆದಿದ್ದಾರೆನ್ನಲಾದ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಂಗಿಯ ಮದುವೆ ಮಾಡಿಸಲು ನನ್ನಿಂದ ಸಾಧ್ಯವಾಗದ ಕಾರಣ ಆಕೆಗೆ ಸರ್ಕಾರಿ ಉದ್ಯೋಗ ನೀಡಿ ಎಂದು ಬರೆದಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

12 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

13 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

13 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

14 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

14 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

14 hours ago