ಕುಂದಾಪುರ : ಕುಂದಾಪುರ ನಗರ ಠಾಣೆಯ ಕಾನ್‌ಸ್ಟೇಬಲ್‌ವೊಬ್ಬರು ಹೊನ್ನಾವರ ತಾಲೂಕಿನ ಕಾಸರಕೋಡು ಇಕೋ ಬೀಚ್ ಬಳಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಗೆ ಅನಾರೋಗ್ಯ ಅಥವಾ ಆನ್‌ಲೈನ್ ಬೆಟ್ಟಿಂಗ್‌ನಿಂದಾಗಿ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಎಂಬ ಶಂಕೆ ಮೂಡಿದೆ.
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ನಾಡು ಮಾಸ್ಕೇರಿ ಗ್ರಾಮದ ನಾಗೇಶ ಗೌಡ ಅವರ ಪುತ್ರ ರಾಮ ಗೌಡ (32) ಆತ್ಮಹತ್ಯೆಗೆ ಶರಣಾದವರು. ಕಳೆದ 5 ವರ್ಷಗಳಿಂದ ಕುಂದಾಪುರ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿದ್ದರು. ಮಂಗಳವಾರ ಘಟನೆ ಬೆಳಕಿಗೆ ಬಂದಿದೆ.
ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳಿಗೆ ತಿಳಿಸದೆ ಫೆಬ್ರವರಿ 2ರಿಂದಲೇ ರಾಮ ಗೌಡ ಅವರು ಕೆಲಸಕ್ಕೆ ಗೈರು ಹಾಜರಾಗಿದ್ದರು. ಅಲ್ಲದೆ ಕಳೆದ ನಾಲ್ಕೈದು ದಿನಗಳಿಂದ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಮಂಗಳವಾರ ಬೆಳಗ್ಗೆ ಕಾಸರಗೋಡಿನ ಇಕೋ ಬೀಚ್ ಸನಿಹದಲ್ಲಿರುವ ಪಾರ್ಕ್ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇನ್ನು ಮೃತದೇಹದ ಬಳಿ ಬ್ಯಾಗ್ ಕೂಡಾ ಪತ್ತೆಯಾಗಿದೆ. ಸ್ಥಳಕ್ಕೆ ಕುಂದಾಪುರ ಎಸ್‌ಐ ಈರಯ್ಯ ಹಾಗೂ ಸಿಬಂದಿ ಭೇಟಿದ್ದು, ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮಯ್ಯ ಗೌಡ ಅವರು ಉತ್ತಮ ವಾಲಿಬಾಲ್ ಪಟುವಾಗಿದ್ದರು. ಕೆಲ ದಿನಗಳಿಂದ ಏಕಾಂಗಿಯಾಗಿರುತ್ತಿದ್ದ ಅವರಿಗೆ ಆರೋಗ್ಯ ಸಮಸ್ಯೆಯೂ ಕಾಡುತ್ತಿತ್ತು ಎನ್ನಲಾಗುತ್ತಿದೆ. ಇದಲ್ಲದೆ ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬ್ಯಾಂಕ್‌ಗಳಲ್ಲಿ ಸಾಲ ಮಾಡಿಕೊಂಡಿದ್ದರು ಎಂದೂ ಹೇಳಲಾಗುತ್ತಿದೆ. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ರಾಮ ಬರೆದಿದ್ದಾರೆನ್ನಲಾದ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತಂಗಿಯ ಮದುವೆ ಮಾಡಿಸಲು ನನ್ನಿಂದ ಸಾಧ್ಯವಾಗದ ಕಾರಣ ಆಕೆಗೆ ಸರ್ಕಾರಿ ಉದ್ಯೋಗ ನೀಡಿ ಎಂದು ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…