Featured

ಕುಂದಾಪುರ : ರಾಷ್ಟ್ರ ರಕ್ಷಣೆಗಾಗಿ ಮತ ಚಲಾಯಿಸಿ , ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾಗಿದೆ : ಕೋಟ ಶ್ರೀನಿವಾಸ್ ಪೂಜಾರಿ – Vishwanews24

ಕಾಂಗ್ರೆಸ್ ಪಕ್ಷದ ಆಡಳಿತವನ್ನು ದೇಶದಲ್ಲಿ ಮತ್ತೊಮ್ಮೆ ನಾವು ನೋಡುವಂತಾಗಬಾರದು

ರಾಷ್ಟ್ರಭಕ್ತರು ಮತ್ತು ರಾಷ್ಟ್ರದ್ರೋಹಿಗಳ ನಡುವಿನ ಚುನಾವಣೆ ಇದು

ನಮ್ಮ ಕಾರ್ಯಕರ್ತರು ತಂಟೆಗೆ ಬಂದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ ಕೋಟ

ಕುಂದಾಪುರ: ನಿಮ್ಮ ಪ್ರತಿಯೊಂದು ಮತಗಳು ದೇಶದ ಒಗ್ಗೂಡುವಿಕೆ ಮತ್ತು ರಾಷ್ಟ್ರ ರಕ್ಷಣೆಯ ದೃಷ್ಟಿಯಲ್ಲಿ ಚಲಾಯಿಸಬೇಕಾಗಿದೆ ಆ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಮೂಲಕ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಭಾರತೀಯ ಜನತಾ ಪಾರ್ಟಿಯ ಕೋಟೇಶ್ವರ ಮಹಾಶಕ್ತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು ಸಶಕ್ತ ಸೇನೆ ದೇಶದ ಆರ್ಥಿಕ ಸುವ್ಯವಸ್ಥೆ ಇದೆಲ್ಲವೂ ನರೇಂದ್ರ ಮೋದಿ ಅವರ ಕೊಡುಗೆ ದೇಶ ಮೊದಲು ಎನ್ನುವ ಸಿದ್ಧಾಂತದೊಂದಿಗೆ ರಾಷ್ಟ್ರಭಕ್ತರು ಮತ್ತು ರಾಷ್ಟ್ರಧ್ರೋಹಿಗಳ ನಡುವಿನ ಚುನಾವಣೆ ಇದಾಗಿದೆ ಎಂದರು

ರಾಮ ಕೇವಲ ಕಾಲ್ಪನಿಕ ಎಂದು ಸುಪ್ರೀಂ ಕೋರ್ಟಿಗೆ ಅಪಿದವಿತ್ ಕೊಟ್ಟ ಕಾಂಗ್ರೆಸ್ ಪಕ್ಷದ ಆಡಳಿತವನ್ನು ದೇಶದಲ್ಲಿ ಮತ್ತೊಮ್ಮೆ ನಾವು ನೋಡುವಂತಾಗಬಾರದು ಎನ್ನುವುದಾದರೆ ಜೈ ಶ್ರೀ ರಾಮ್ ಘೋಷಣೆಯೊಂದಿಗೆ ರಾಷ್ಟ್ರ ರಕ್ಷಣೆಗಾಗಿ ನಾವು ಮತ ಚಲಾಯಿಸಬೇಕಾಗಿದೆ ಎಂದರು.

ಇತ್ತೀಚೆಗೆ ಬಿಜೆಪಿಯ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಬೆದರಿಕೆ ಹಾಕುತ್ತಿರುವುದನ್ನು ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ ನಮ್ಮ ಕಾರ್ಯಕರ್ತರು ತಂಟೆಗೆ ಬಂದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಕುಂದಾಪುರದ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಮಂಡಲದ ನಿಕತಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಸುಧೀರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣ ಗೊಲ್ಲ, ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನಕರ ಶೆಟ್ಟಿ, ಕೋಟೇಶ್ವರ ಪಂಚಾಯತ್ ಅಧ್ಯಕ್ಷ ರಾಗಿಣಿ ದೇವಾಡಿಗ, ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

22 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago