Featured

ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು – vishwanews24

ಕುಂದಾಪುರ: ಕೆರೆಗೆ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವು

ಕುಂದಾಪುರ : ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ ಎಂಬುವರ ಮಗ ನಾಗೇಂದ್ರ (13) ಹಾಗೂ ಅಲ್ಲೇ ಸಮೀಪದ ನಿವಾಸಿ ಕಟ್ಟಡ ಸಾಮಾಗ್ರಿ ಪೂರೈಕೆ ಕೆಲಸ ಮಾಡಿಕೊಂಡಿರುವ ಬೈಂದೂರು ರೈಲ್ವೆ ನಿಲ್ದಾಣದ ಬಳಿಯ ಜಿ.ಎಂ ಕಂಪೌಂಡ್ ನಿವಾಸಿ ಶಾನು ಶಾಲಿಯಾನ್ ಎಂಬುವರ ಮಗ ಶಾನು ಮೊಹಮದ್ ಶಫಾನ್ (13) ಸಾವನ್ನಪ್ಪಿದ ಬಾಲಕರು.

ಬೈಂದೂರು ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳು. ಇಬ್ಬರೂ ಜೊತೆಗೆ ಕಲಿಯುತ್ತಿದ್ದು ಕಲಿಕೆಯಲ್ಲಿ ಸಾಧಾರಣವಾಗಿದ್ದರು. ಶಾಲೆಯಲ್ಲಿ ಈಗ ಪರೀಕ್ಷೆ ನಡೆಯುತ್ತಿದ್ದು ಮಂಗಳವಾರ ಇಂಗ್ಲಿಷ್ ಪರೀಕ್ಷೆ ಮುಗಿಸಿ ಮಧ್ಯಾಹ್ನ ಮನೆಗೆ ಬಂದು ಊಟ ಮಾಡಿದ ಬಳಿಕ ಸಂಜೆ 4 ಗಂಟೆ ಸುಮಾರಿಗೆ ನಾಗೇಂದ್ರ ಶಾನು ಮೊಹಮದ್ ಶಫಾನ್ ನ ಮನೆಗೆ ಬಂದು ಆತನನ್ನು ಕರೆದುಕೊಂಡು ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಕಟ್ಟೆ ಎಂಬ ಕೆರೆಯಲ್ಲಿ ಈಜಲು ಹೋಗಿದ್ದರು ಎನ್ನಲಾಗಿದೆ.

ರಾತ್ರಿಯಾದರೂ ವಿದ್ಯಾರ್ಥಿಗಳು ಮನೆಗೆ ಬಾರದೇ ಇದ್ದಾಗ ಕೆರೆ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಬಳಿ ಒಂದು ಸೈಕಲ್, ಬಟ್ಟೆ ಹಾಗೂ ಎರಡು ಜೊತೆ ಚಪ್ಪಲಿ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬುಧವಾರ ಬೆಳಿಗ್ಗೆ ಸುಮಾರು 01:30 ಗಂಟೆಗೆ ಶಾನು ಮೊಹಮದ್ ಶಫಾನ್ ಹಾಗೂ 02:25 ಗಂಟೆಗೆ ನಾಗೇಂದ್ರ ದೇವಾಡಿಗ ರವರ ಮೃತ ದೇಹ ಪತ್ತೆಯಾಗಿದೆ.

ಕೆರೆಕಟ್ಟೆ ಕೆರೆಯು ಮಧ್ಯದಲ್ಲಿ 40 ಅಡಿ ಹಾಗೂ ಸುತ್ತಲೂ 10-20 ಅಡಿ ಆಳವಿದೆ. ಈ ಕೆರೆಯಲ್ಲಿ ಪ್ರತಿ ದಿನ ಊರಿನವರು ಈಜಲು ಬರುತ್ತಿರುತ್ತಾರೆ. ಮಂಗಳವಾರ ದಿನ ಮಳೆ ಇದ್ದುದರಿಂದ ಯಾರು ಈಜಲು ಬಂದಿರಲಿಲ್ಲ ಎನ್ನಲಾಗಿದೆ. ಸರಿಯಾಗಿ ಈಜಲು ಬಾರದ ಇಬ್ಬರು ಈಜಲು ಹೋದಾಗ ಮುಳುಗಿ ಮೃತ ಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಇಬ್ಬರ ಮೃತ ದೇಹಗಳನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಡಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

20 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

20 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

20 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

21 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

22 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

22 hours ago