ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಬುಧವಾರ ಬೆಳಿಗ್ಗೆ ಮೃತದೇಹವನ್ನು ಹುಡುಕಿ ಮೇಲಕ್ಕೆತ್ತಲಾಯಿತು.
ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಆತ್ಮಹತ್ಯೆ ಮಾಡಿಕೊಂಡವರು.
ಘಟನೆ ವಿವರ: ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಪದ್ಮನಾಭ ಅವರು ಕಳೆದ ನಾಲ್ಕು ತಿಂಗಳಿನಿಂದ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮಂಗಳವಾರ ಬೆಳಿಗ್ಗೆ ಮನೆಯಿಂದ ಅವರು ತೆರಳಿದ್ದು ರಾತ್ರಿಯಾದರೂ ಮನೆಗೆ ವಾಪಾಸ್ಸು ಬಂದಿರಲಿಲ್ಲ. ರಾತ್ರಿ ವೇಳೆ ಇವರ ದ್ವಿಚಕ್ರ ವಾಹನ ದೇವಸ್ಥಾನದ ಸಮೀಪ ಪತ್ತೆಯಾಗಿತ್ತು. ಮನೆಯವರು ಹುಡುಕಾಟ ಮಾಡಿದ್ದರೂ ಸುಳಿವು ದೊರೆತಿರಲಿಲ್ಲ. ಕೋಟಿತೀರ್ಥ ಪುಷ್ಕರಣಿಯ ಪೂರ್ವ ಭಾಗದ ಮೆಟ್ಟಿಲಿನ ಮೇಲೆ ಚಪ್ಪಲಿ ಹಾಗೂ ಟೋಪಿ ಇದ್ದ ಕಾರಣ ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಬುಧವಾರ ಬೆಳಿಗ್ಗೆನಿಂದ ಶೋಧ ನಡೆಸಲಾಯಿತು.
ನಿತ್ಯ ಕೆರೆಯಲ್ಲಿ ಈಜಲು ಬರುವ ಮಾರ್ಕೋಡು ಸುಧೀರ್ ಕುಮಾರ್ ಶೆಟ್ಟಿ, ಪ್ರಭಾಕರ ಶೆಟ್ಟಿ, ಸತ್ಯನಾರಾಯಣ ಮಂಜ ಮೊದಲಾದವರು ಬೋಟ್ ಸಹಾಯದಿಂದ ನೀರಿನಲ್ಲಿ ಶೋಧ ನಡೆಸಿದ್ದು 9 ಗಂಟೆಯ ವೇಳೆ ಮೃತದೇಹ ನೀರಿನಲ್ಲಿರುವುದು ತಿಳಿದುಬಂದಿದೆ. ಇದೇ ಸಮಯಕ್ಕೆ ಆಗಮಿಸಿದ ಮುಳುಗುತಜ್ಞ ಈಶ್ವರ ಮಲ್ಪೆ ಮತ್ತು ತಂಡ ನೀರಿಗಿಳಿದು ಸ್ಥಳೀಯ ಈಜುಗಾರರ ನೆರವಿನಲ್ಲಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ಸುರತ್ಕಲ್: ಮುಕ್ಕ ಆಸ್ಪತ್ರೆಯ ಕ್ಯಾಂಟೀನ್, ಹಾಸ್ಟೆಲ್ ಅಡುಗೆ ಕೋಣೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ ; ಪರಿಶೀಲನೆ ಸುರತ್ಕಲ್: ಆರೋಗ್ಯ…
ಉಡುಪಿ : ನೇರ ಸಂದರ್ಶನ ಉಡುಪಿ: ನಗರದ ಕಲ್ಸಂಕ ಅಂಬಾಗಿಲು ರಸ್ತೆಯ ಗುಂಡಿಬೈಲಿನಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ನವೆಂಬರ್ 13 ರಂದು…
ಬಂಟ್ವಾಳ : ರಸ್ತೆಯಲ್ಲೇ ಕೆಟ್ಟು ನಿಂತಿದ್ದ ಲಾರಿಯಲ್ಲಿ ಪರಿಶೀಲನೆ ವೇಳೆ ಅಕ್ರಮ ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ…
ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ ಉತ್ತರ ಪ್ರದೇಶ…
ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…
ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…