ಕುಂದಾಪುರ: ಕೋಟ ಡಬಲ್ ಮರ್ಡರ್ ಪ್ರಕರಣ : ಆರೋಪಿ ಸಲ್ಲಿಸಿದ್ದ ಜಾಮೀನು ವಜಾಗೊಳಿಸಿದ ಸುಪ್ರೀಂ -Vishwanews24

ಕುಂದಾಪುರ: ಕೋಟದಲ್ಲಿ 2019ರ ಜನವರಿ 26ರಂದು ನಡೆದಿದ್ದ ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಗೆ ಹೈ ಕೋರ್ಟ್ ಜಾಮೀನು ದೊರೆಯುತ್ತಿದ್ದಂತೆ ಕೊಲೆಯಾದ ಭರತ್‌ನ ಬಡ ತಾಯಿ ಪಾರ್ವತಿ ದಿಟ್ಟವಾಗಿ ಸುಪ್ರೀಂ ಕೋರ್ಟಿನ ಕದ ತಟ್ಟಿದ್ದು, ಜಿಲ್ಲಾ ಪಂಚಾಯತ್ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್‌ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ವಜಾಗೊಳಿಸಿ ಆದೇಶ ನೀಡಿದೆ.

ಅಂದು ನಡೆದ ಬರ್ಬರ ಹತ್ಯೆಗೆ ಇಡೀ ಕರಾವಳಿ ಮಾತ್ರವಲ್ಲ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಕರಾವಳಿಯಲ್ಲಿ ಮೊದಲ ಬಾರಿಗೆ ಹತ್ಯಾ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಪೊಲಿಸರು ಶಾಮೀಲಾಗಿದ್ದು ಬೆಳಕಿಗೆ ಬಂದ ಪ್ರಕರಣ ಇದಾಗಿತ್ತು. ಅಲ್ಲದೇ ಜಿಲ್ಲಾ ಪಂಚಾಯಿತಿ ಸದಸ್ಯರು ಕೊಲೆಗೆ ಸಂಚು ಹೂಡಿದ್ದರು ಎಂದು ಆರೋಪಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ರಾಘವೇಂದ್ರ ಕಾಂಚನ್ ಅವರನ್ನು ಆರೋಪಿಯನ್ನಾಗಿ ಮಾಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೆಳ ನ್ಯಾಯಾಲಯದಲ್ಲಿ ಜಾಮೀನು ದೊರೆಯದಿದ್ದ ಕಾರಣಕ್ಕೆ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಹೈಕೋರ್ಟಿನ ಮೊರೆ ಹೋಗಿ ಅಲ್ಲಿ ಶರತ್ತು ಬದ್ದ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ಬಳಿಕ ಆರು ಆರೋಪಿಗಳಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಉಚ್ಛ ನ್ಯಾಯಾಲಯದಲ್ಲಿ ಜಾಮೀನು ದೊರಕುತ್ತಿದ್ದಂತೆ ಹತ್ಯೆಯಾದ ಭರತನ ತಾಯಿ ಪಾರ್ವತಿ, ಆರೋಪಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು. ಪಾರ್ವತಿಯವರ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಜಾಮೀನು ವಜಾಗೊಳಿಸಿ ಆದೇಶ ನೀಡಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ. ಸುಪ್ರೀಂ ಕೋರ್ಟಿನಲ್ಲಿ ಸಂತ್ರಸ್ಥೆ ಪಾರ್ವತಿ ಪರ ಸುಪ್ರೀಂ ಕೋರ್ಟ್ ವಕೀಲ ಚಂದ್ರಶೇಖರ್ ವಾದ ಮಂಡಿಸಿದ್ದರು.

ಆ ಮೂಲಕ ಕರಾವಳಿಯ ಗ್ರಾಮೀಣ ಭಾಗದ ಕೊಲೆ ಪ್ರಕರಣವೊಂದು ರಾಜಕೀಯದ ಒತ್ತಡಗಳ ನಡುವೆಯೂ ಸರ್ವೋಚ್ಚ ನ್ಯಾಯಾಲಯದಲ್ಲಿ ತನಿಖೆಗೆ ಅಂಗೀಕಾರವಾಗಿ, ಸಂತ್ರಸ್ಥೆಗೆ ನ್ಯಾಯ ದೊರಕಿರುವುದು ಇದೇ ಮೊದಲು ಎನ್ನಲಾಗಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago