ಕುಂದಾಪುರ: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು, ಕೋಡಿಯ ಸೇತುವೆಯ ಮೇಲೆ ತನ್ನ ಸ್ಕೂಟಿಯನ್ನು ಇರಿಸಿ ನದಿಗೆ ಹಾರಿ ನಾಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್ (32) ಎಂದು ಗುರುತಿಸಲಾಗಿದೆ. ಅವರ ಪತಿ ಇಕ್ಬಾಲ್ (36) ವಿದೇಶದಲ್ಲಿ ಉದ್ಯೋಗದಲ್ಲಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ವಾಸಿಸುತ್ತಿದ್ದರು.
ವರದಿಗಳ ಪ್ರಕಾರ, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟಿದ್ದರು. ಬಳಿಕ ಅವರ ಸ್ಕೂಟಿ ಹಾಗೂ ಚಪ್ಪಲಿ ಕೋಡಿ ಸೇತುವೆಯ ಮೇಲೆ ಪತ್ತೆಯಾಗಿದೆ. ಹೀನಾ ಅವರು ನದಿಗೆ ಹಾರಿರಬಹುದು ಎಂದು ಶಂಕಿಸಲಾಗಿದೆ. ಜೊತೆಗೆ ಸ್ಕೂಟಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಘಟನೆ ಬಳಿಕ ಕುಂದಾಪುರ ಪೊಲೀಸರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯಿಂದ ಹಗಲಿಡೀ ನದಿಯಲ್ಲಿ ದೋಣಿಯ ಮೂಲಕ ಹುಡುಕಾಟ ನಡೆಸಲಾಯಿತು. ಆದರೆ ಇದುವರೆಗೂ ಮಹಿಳೆಯ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಹೀನಾ ಅವರ ತಾಯಿ ಸಾದಿಕಾ ಬಾನು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…