Featured

ಕುಂದಾಪುರ: ಕೌಟುಂಬಿಕ ಕಲಹ – ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪತಿ – vishwanews24

ಕುಂದಾಪುರ: ಕೌಟುಂಬಿಕ ಕಲಹ ; ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪತಿ

ಕುಂದಾಪುರ :ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ  ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾಳಾವರ ಗ್ರಾಮದ ಅಂಗನವಾಡಿ ಸಮೀಪದ ನಿವಾಸಿ ಹರೀಶ್ ಬೋವಿ(40) ಎಂದು ಗುರುತಿಸಲಾಗಿದೆ.

ಹರೀಶ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದ ಅವರು, ಇತ್ತೀಚೆಗೆ ಗಂಭೀರವಾಗಿದ್ದರು ಎನ್ನಲಾಗಿದೆ. ಆಗಾಗ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದರೆನ್ನಲಾಗಿದೆ. ಮಂಗಳವಾರ ಬೆಳಿಗ್ಗೆ ಜಗಳ ತಾರಕ್ಕೇರಿ ಮಕ್ಕಳನ್ನು ಬಾವಿಗೆ ದೂಡಲೆತ್ನಿಸಿದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡಿದ್ದ ಅವರ ಪತ್ನಿ ಕಂಡ್ಲೂರು ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಗಂಡ ಹೆಂಡತಿಯನ್ನು ಠಾಣೆಗೆ ಕರೆಯಿಸಿ ಪಂಚಾಯಿತಿ ಮಾಡಿ ಆಟೋದಲ್ಲಿ ಕಳಿಸಿದ್ದರು. ಠಾಣೆಯಿಂದ ಬರುತ್ತಿದ್ದ ವೇಳೆ ಕಂಡ್ಲೂರು ಸೇತುವೆ ಸಮೀಪ ಆಟೋ ಚಾಲಕನಿಗೆ ರಿಕ್ಷಾ ನಿಧಾನಿಸುವಂತೆ ತಿಳಿಸಿದ ಹರೀಶ್ ವಾರಾಹಿ ಹೊಳೆಗೆ ಸೇತುವೆಯಿಂದ ಹಾರಿದ್ದಾರೆ.

ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು, ಪೊಲೀಸರು, ಅಗ್ನಿಶಾಮಕದಳ, ಮುಳುಗುತಜ್ಞರು ಹರೀಶ್ ಪತ್ತೆಗೆ ಶೋಧಕಾರ್ಯದಲ್ಲಿ ತೊಡಗಿದರು. ಆದರೆ ವಿಪರೀತ ಮಳೆ, ಉಕ್ಕಿ ಹರಿಯುತ್ತಿರುವ ನದಿ ನೀರಿನಲ್ಲಿ ಪತ್ತೆ ಕಾರ್ಯ ಸಫಲವಾಗಿಲ್ಲ. ಹರೀಶ್ ಗೆ ಇಬ್ಬರು ಹೆಣ್ಣುಮಕ್ಕಳಿದ್ದು ಹಿರಿಮಗಳು ಮೂರನೇ ತರಗತಿ ಹಾಗೂ ಕಿರಿಯವಳು ಅಂಗನವಾಡಿಗೆ ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago