ಕುಂದಾಪುರ :ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾಳಾವರ ಗ್ರಾಮದ ಅಂಗನವಾಡಿ ಸಮೀಪದ ನಿವಾಸಿ ಹರೀಶ್ ಬೋವಿ(40) ಎಂದು ಗುರುತಿಸಲಾಗಿದೆ.
ಹರೀಶ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದ ಅವರು, ಇತ್ತೀಚೆಗೆ ಗಂಭೀರವಾಗಿದ್ದರು ಎನ್ನಲಾಗಿದೆ. ಆಗಾಗ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದರೆನ್ನಲಾಗಿದೆ. ಮಂಗಳವಾರ ಬೆಳಿಗ್ಗೆ ಜಗಳ ತಾರಕ್ಕೇರಿ ಮಕ್ಕಳನ್ನು ಬಾವಿಗೆ ದೂಡಲೆತ್ನಿಸಿದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡಿದ್ದ ಅವರ ಪತ್ನಿ ಕಂಡ್ಲೂರು ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಗಂಡ ಹೆಂಡತಿಯನ್ನು ಠಾಣೆಗೆ ಕರೆಯಿಸಿ ಪಂಚಾಯಿತಿ ಮಾಡಿ ಆಟೋದಲ್ಲಿ ಕಳಿಸಿದ್ದರು. ಠಾಣೆಯಿಂದ ಬರುತ್ತಿದ್ದ ವೇಳೆ ಕಂಡ್ಲೂರು ಸೇತುವೆ ಸಮೀಪ ಆಟೋ ಚಾಲಕನಿಗೆ ರಿಕ್ಷಾ ನಿಧಾನಿಸುವಂತೆ ತಿಳಿಸಿದ ಹರೀಶ್ ವಾರಾಹಿ ಹೊಳೆಗೆ ಸೇತುವೆಯಿಂದ ಹಾರಿದ್ದಾರೆ.
ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು, ಪೊಲೀಸರು, ಅಗ್ನಿಶಾಮಕದಳ, ಮುಳುಗುತಜ್ಞರು ಹರೀಶ್ ಪತ್ತೆಗೆ ಶೋಧಕಾರ್ಯದಲ್ಲಿ ತೊಡಗಿದರು. ಆದರೆ ವಿಪರೀತ ಮಳೆ, ಉಕ್ಕಿ ಹರಿಯುತ್ತಿರುವ ನದಿ ನೀರಿನಲ್ಲಿ ಪತ್ತೆ ಕಾರ್ಯ ಸಫಲವಾಗಿಲ್ಲ. ಹರೀಶ್ ಗೆ ಇಬ್ಬರು ಹೆಣ್ಣುಮಕ್ಕಳಿದ್ದು ಹಿರಿಮಗಳು ಮೂರನೇ ತರಗತಿ ಹಾಗೂ ಕಿರಿಯವಳು ಅಂಗನವಾಡಿಗೆ ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…