ಕುಂದಾಪುರ: ಖಾಸಗಿ ಬಸ್ಸಿಗೆ  ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ – ಓರ್ವ ವಿದ್ಯಾರ್ಥಿ ಗಂಭೀರ ; ಹಲವರಿಗೆ ಗಾಯ – vishwanews24

Featured, ಉಡುಪಿ

ಕುಂದಾಪುರ: ಖಾಸಗಿ ಬಸ್ಸಿಗೆ  ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ – ಓರ್ವ ವಿದ್ಯಾರ್ಥಿ ಗಂಭೀರ ; ಹಲವರಿಗೆ ಗಾಯ

ಕುಂದಾಪುರ: ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ರಭಸವಾಗಿ ಬಂದು ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರಿನ ಪ್ರವಾಸಿ ಹೋಟೆಲ್ ಎದುರು ಆ.10ರ ಶನಿವಾರ ಬೆಳಗ್ಗೆ ಸಂಭವಿಸಿದೆ.

ಅಪಘಾತದ ಪರಿಣಾಮ ಬಸ್ಸಿಲ್ಲಿದ್ದ ಓರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, 7-8 ಮಂದಿ ವಿದ್ಯಾರ್ಥಿಗಳ ಸಹಿತ ಹಲವರಿಗೆ ಗಾಯವಾಗಿದೆ. ಲಾರಿಯ ಚಾಲಕ, ನಿರ್ವಾಹಕ ಕೂಡಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ :ಮಗು ಅನಧಿಕೃತ ಮಾರಾಟ; ಮೂವರ ವಿರುದ್ಧ ಪ್ರಕರಣ ದಾಖಲು – vishwanews24

ಬಸ್ ಬೈಂದೂರಿಂದ ಕುಂದಾಪುರಕ್ಕೆ ಬರುತ್ತಿತ್ತು. ಅಪಘಾತದ ತೀವ್ರತೆಗೆ ಬಸ್ಸಿನ ಹಿಂಬದಿ ಹಾಗೂ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದೆ.

ಕುಂದಾಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ‌.

ಬ್ರೆಜಿಲ್‌ : ವಿಮಾನ ದುರಂತ – ಎಲ್ಲಾ 62 ಪ್ರಯಾಣಿಕರು ಸಾವು – vishwanews24

Leave a Reply