ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರದ ಹಂಗಳೂರು ಬಳಿ ಗುರುವಾರ ರಾತ್ರಿ ನಡೆದಿದೆ.
ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ (39) ಮೃತ ದುರ್ದೈವಿ.
ಸುಂದರ ಅವರು ಕೋಟೇಶ್ವರ ಕಡೆಯಿಂದ ಬೈಕ್ ನಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದಾಗ ಹೆದ್ದಾರಿಯಿಂದ ಖಾಸಗಿ ಬಸ್ ಡಿಪೋಗೆ ತೆರಳುತ್ತಿದ್ದಾಗ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ನಂದಕುಮಾರ್ ಸಹಿತ ಪೊಲೀಸರು ಭೇಟಿ ನೀಡಿದರು. ಮೃತರು ಕಳೆದ 15 ವರ್ಷಗಳಿಂದ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದರು. 4 ತಿಂಗಳ ಹಿಂದಷ್ಟೇ ಖಾಯಂ ನೇಮಕಾತಿ ಆದೇಶ ಪಡೆದಿದ್ದರು ಎನ್ನಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…