ಕುಂದಾಪುರ: ಈದ್ ಪ್ರಯುಕ್ತ ಖಾಸಗಿ ರೆಸಾರ್ಟ್ ನಲ್ಲಿ ಆಟವಾಡಲು ಹೋಗಿದ್ದ ಸಂದರ್ಭದಲ್ಲಿ ಆಟವಾಡಲು ನೀರಿಗಿಳಿದ ನಾಲ್ಕನೇ ತರಗತಿಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ಶಂಕರನಾರಾಯಣ ದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಮುಹಮ್ಮದ್ ಅರೀಝ್ (10) ಮೃತಪಟ್ಟ ಬಾಲಕ.ಗುರುವಾರ ಮನೆ ಮಂದಿಯೊಂದಿಗೆ ಹೆಂಗವಳ್ಳಿ ಯ ಖಾಸಗಿ ರೆಸಾರ್ಟ್ ಸ್ವಿಮಿಂಗ್ ಫುಲ್ ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.
ಬಾಲಕ ಅರೀಝ್ ಸಾವಿಗೆ ರೆಸಾರ್ಟ್ ಅವರ ನಿರ್ಲಕ್ಷ್ಯವೇ ಕಾರಣವೆಂದು ದೂರಿನಲ್ಲಿ ಆರೋಪಿಸಲಾಗಿದೆ.ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತ ವಿದ್ಯಾರ್ಥಿನಿ ತಂದೆ, ತಾಯಿ ಅಪಾರ ಬಂಧು ಬಳಗವನ್ನು ಅಗಲಿದ್ದಾನೆ. ಈತ ಹೂಡೆಯ ದಾರುಸ್ಟಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಯಾಗಿದ್ದ ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…