Featured

ಕುಂದಾಪುರ : ಗಂಗೊಳ್ಳಿಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಆರೋಪ ; ವಿ. ಹೆಚ್.ಪಿ ಮತ್ತು ಬಜರಂಗದಳದಿಂದ ಮೀನು ಖರೀದಿಸುವ ಮೂಲಕ ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ – Vishwanews24

ಕುಂದಾಪುರ : ಗಂಗೊಳ್ಳಿಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಆರೋಪ ; ವಿ. ಹೆಚ್.ಪಿ ಮತ್ತು ಬಜರಂಗದಳದಿಂದ ಮೀನು ಖರೀದಿಸುವ ಮೂಲಕ ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ – Vishwanews24

ಕುಂದಾಪುರ: ಗಂಗೊಳ್ಳಿಯಲ್ಲಿ ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಅನ್ಯಕೋಮಿನ ಒಂದು ವರ್ಗ ಗಂಗೊಳ್ಳಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದನ್ನು ಖಂಡಿಸಿ ಮೀನುಗಾರ ಮಹಿಳೆಯರಿಗೆ ನೈತಿಕ ಬೆಂಬಲ ನೀಡಲು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡ ಮುಂದಾಗಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕುಂದಾಪುರ ಪ್ರಖಂಡದ ಪ್ರಮುಖರು ಹಾಗೂ ನಂದಗೋಕುಲ ಗೇರುಬೀಜ ಕಾರ್ಖಾನೆಯ ನೌಕರರು, ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮಂಗಳವಾರ ಮೀನು ಖರೀದಿಸಿ ಮಹಿಳಾ ಮೀನುಗಾರರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ಮುಂದಿನ ದಿನಗಳಲ್ಲಿ ಬೇರೆ ಬೇರೆ ಗ್ರಾಮದ ಹಿಂದೂ ಸಮಾಜದವರು ಗಂಗೊಳ್ಳಿಗೆ ಬಂದು ಮೀನು ಖರೀದಿಸುವ ಕಾರ್ಯ ಮಾಡಲಿದ್ದಾರೆ. ಯಾವುದೇ ಕಾರಣಕ್ಕೂ ಮಹಿಳಾ ಮೀನುಗಾರರು ಎದೆಗುಂದಬಾರದು ಎಂದು ಮಹಿಳೆಯರಲ್ಲಿ ವಿಶ್ವಾಸ ತುಂಬಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್‍ನ ಕೇಂದ್ರಿಯ ವಿಶ್ವಸ್ಥ ಮಂಡಳಿ ಸದಸ್ಯ ಪ್ರೇಮಾನಂದ ಶೆಟ್ಟಿ, ಗಂಗೊಳ್ಳಿಯಲ್ಲಿ ನಡೆದಿರುವ ವಿದ್ಯಮಾನದ ಬಳಿಕ ಅನ್ಯಕೋಮಿನವರು ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದು ಖಂಡನೀಯ. ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಹೊಟ್ಟೆಪಾಡಿಗೆ, ದೈನಂದಿನ ಜೀವನ ನಡೆಸಲು ಮೀನು ಮಾರಾಟ ಮಾಡುತ್ತಿರುವ ಮೀನುಗಾರರಿಂದ ಒಂದೇ ಸಮನೆ ಮೀನು ಖರೀದಿಗೆ ಬಹಿಷ್ಕಾರ ಹಾಕುವ ಮೂಲಕ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಅನ್ಯಕೋಮಿನವರ ಆರ್ಥಿಕ ಬಹಿಷ್ಕಾರದ ಪ್ರಯತ್ನವನ್ನು ಧಿಕ್ಕರಿಸುವ ನಿಟ್ಟಿನಲ್ಲಿ, ಮಹಿಳಾ ಮೀನುಗಾರರಲ್ಲಿ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಯಾರೇ ಬಹಿಷ್ಕಾರ ಹಾಕಿದರೂ, ಯಾರೇ ದಾಳಿ ಮಾಡಿದರೂ ಕೂಡ ನಾವು ನಿರಂತರವಾಗಿ ಮಹಿಳ ಮೀನುಗಾರರಿಗೆ ಸಹಕಾರ ನೀಡುತ್ತೇವೆ. ನಿಮ್ಮೊಟ್ಟಿಗೆ ಬದುಕುತ್ತೇವೆ ಎಲ್ಲಾ ರೀತಿಯಲ್ಲಿ ಶಕ್ತಿಯನ್ನು ನೀಡುತ್ತೇವೆ ಎಂದು ಅವರು ಹೇಳಿದರು.

ಸಾವಿರಾರು ವರ್ಷಗಳಿಂದ ಇದೇ ರೀತಿಯಲ್ಲಿ ಬಹಿಷ್ಕಾರ ಹಾಕುತ್ತಾ ಇಡೀ ದೇಶಾದ್ಯಂತ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ. ಹಿಂದೂಗಳನ್ನು ರಾಷ್ಟ್ರದಿಂದ ಬೇರ್ಪಡಿಸುವ ಭಾಗವಾಗಿ ಷಡ್ಯಂತ್ರ ನಡೆದಿದೆ. ಈ ಷಡ್ಯಂತ್ರ ಇನ್ನು ಮುಂದೆ ಯಶಸ್ವಿಯಾಗುವುದಿಲ್ಲ. ಸಮಸ್ತ ಹಿಂದು ಜನಾಂಗ ಎಚ್ಚೆತ್ತುಕೊಂಡಿದೆ. ಈ ದೇಶದ ಯಾವುದೇ ಮೂಲೆಯಲ್ಲಿ ಹಿಂದು ಸಮಾಜದ ಮೇಲೆ ಅಕ್ರಮಣ ಅಥವಾ ಇಂತಹ ವಿಭಜನೆ ಶಕ್ತಿಗಳು ತಮ್ಮ ಕಾರ್ಯ ಚಟುವಟಿಕೆಗಳನ್ನು ತೋರಿಸಿದರೆ ಸಮಸ್ತ ದೇಶದ ಹಿಂದು ಸಮಾಜ ತಕ್ಕ ನೀಡಲು ಸಿದ್ಧವಾಗಿದೆ. ನಿಮ್ಮ ಯಾವುದೇ ಷಡ್ಯಂತ್ರ ವಿಫಲ ಮಾಡಲು ನಾವು ಸಿದ್ಧರಿದ್ದೇವೆ. ಇವತ್ತಿನವರೆಗೆ ನೀವು ನಮ್ಮ ವಿಶ್ವಾಸ ಇಟ್ಟುಕೊಂಡು ನಮ್ಮೊಟ್ಟಿಗೆ ಬದುಕುವ ನಾಟಕ ಮಾಡುತ್ತಾ ನಮ್ಮ ಎಲ್ಲಾ ವ್ಯಾಪಾರಿಗಳ ವ್ಯಾಪಾರವನ್ನು ಸೋಲಿಸುವ ಪ್ರಯತ್ನ ಮಾಡಿದ್ದೀರಿ ಎಂದು ಆರೋಪಿಸಿದ ಅವರು ನಾವು ಯಾವತ್ತೂ ಕೂಡ ಹಿಂದೂ ಸಮಾಜ ಮೀನುಗಾರರ ಪರವಾಗಿದ್ದೇವೆ ಎಂದು ಹೇಳಿದರು.

ವಿಹಿಂಪ ಕುಂದಾಪುರ ತಾಲೂಕು ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಗೋಳಿಯಂಗಡಿ, ಬಜರಂಗದಳ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ, ವಿಹಿಂಪ ಸಂಪರ್ಕ ಪ್ರಮುಖ್ ಗಿರೀಶ ಕುಂದಾಪುರ, ಬಜರಂಗದಳ ತಾಲೂಕು ಸಂಚಾಲಕ ಸುಧೀರ್, ತಾಲೂಕು ಮಠ ಮಂದಿರ ಪ್ರಮುಖ್ ಶ್ರೀನಿವಾಸ ಕುಂದರ್, ಬಿಎಂಎಸ್ ಗೌರವಾಧ್ಯಕ್ಷ ಕೆ.ಟಿ.ಸತೀಶ್, ಸಂಕೇತ್ ಕೊರ್ಗಿ, ವಿಹಿಂಪ ಮತ್ತು ಬಜರಂಗದಳ ಕಾರ್ಯಕರ್ತರು, ನಂದಗೋಕುಲ ಗೇರುಬೀಜ ಕಾರ್ಖಾನೆಯ ನೌಕರರು, ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

11 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

11 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

11 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

12 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

12 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

13 hours ago