ಕುಂದಾಪುರ: ಮಾರಾಟಕ್ಕಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಡಿಸಿಐಬಿ ಪೊಲೀಸರ ತಂಡ ಗುರುವಾರ ರಾತ್ರಿ ಕುಂದಾಪುರ ಕೋಡಿಯಲ್ಲಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಕುಂದಾಪುರದ ಕೋಡಿ ಮುಲ್ಲಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಎಂದು ಗುರುತಿಸಲಾಗಿದೆ. ಆತನಿಗೆ ಗಾಂಜಾ ನೀಡಿದ ಮಸೂದ್ ಯಾನೆ ಚಿನ್ನು ಪರಾರಿಯಾಗಿದ್ದಾನೆ. ಬಂಧಿತನಿಂದ 33 ಸಾವಿರ ಮೌಲ್ಯದ 1 ಕೆ.ಜಿ.100 ಗ್ರಾಂ ಗಾಂಜಾ ಹಾಗೂ 10,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.
ರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್, ಮಸೂದ್ ಯಾನೆ ಚಿನ್ನು ಎಂಬವನಿಂದ ಗಾಂಜಾ ತೆಗೆದುಕೊಂಡು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಈ ವೇಳೆ ಖಚಿತ ಮಾಹಿತಿ ಪಡೆದ ಉಡುಪಿ ಡಿಸಿಐಬಿ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಕುಂದಾಪುರ ಕೋಡಿ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್ನಿಂದ 33 ಸಾವಿರ ಮೌಲ್ಯದ ಗಾಂಜಾ ಹಾಗೂ 10,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆಯಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…