ಕುಂದಾಪುರ: ಶೆಡ್’ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು ಈ ವೇಳೆ ಓರದವ ಪರಾರಿಯಾಗಿದ್ದಾನೆ. ಜಪ್ತಿ ಗ್ರಾಮದ ಇಂಬಾಳಿ ಎಂಬಲ್ಲಿ ಈ ಘಟನೆ ನಡೆದಿದೆ.
ಕಂಡ್ಲೂರು ನಿವಾಸಿಗಳಾದ ಕರಾಣಿ ಮಹಮ್ಮದ್ ನದೀಮ್(25), ಬೆಟ್ಟಿ ಮಹಮ್ಮದ್ ಅಫ್ಜಲ್ (28) ಬಂಧಿತ ಆರೋಪಿಗಳಾಗಿದ್ದು ರಯಾನ್ ಎಂಬಾತ ಪರಾರಿಯಾಗಿದ್ದಾನೆ.
ಗ್ರಾಮಾಂತರ ಠಾಣೆ ಪೊಲೀಸ್ ಉಪನಿರೀಕ್ಷಕ ರಾಜ್ ಕುಮಾರ್ ಅವರಿಗೆ ಜಪ್ತಿಗ್ರಾಮದ ಇಂಬಾಳಿಯಲ್ಲಿರುವ ವ್ಯಕ್ತಿಯೊಬ್ಬರ ಶೆಡ್ಡಿನಲ್ಲಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಬಂದಿದ್ದು ಈ ವೇಳೆ ದಾಳಿ ನಡೆಸಿ ಆರೋಪಿತರಾದ ಕರಾಣಿ ಮಹಮ್ಮದ್ ನದೀಮ್ ಹಾಗೂ ಬೆಟ್ಟಿ ಮಹಮ್ಮದ್ ಅಫ್ಜಲ್ ರನ್ನು ಬಂಧಿಸಿದ್ದು ಸ್ಥಳದಲ್ಲಿದ್ದ ಇನ್ನೊಬ್ಬ ಆರೋಪಿಯಾದ ರಯಾನನು ತಪ್ಪಿಸಿಕೊಂಡಿದ್ದಾನೆ. ಆರೋಪಿಗಳ ಬಳಿ ಇದ್ದ 360 ಗ್ರಾಂ ತೂಕದ ಗಾಂಜಾ (ಸುಮಾರು 8000/- ಮೌಲ್ಯ) ಹಾಗೂ 2 ಬೈಕ್, ಎರಡು ಮೊಬೈಲನ್ನು ವಶಕ್ಕೆ ಪಡೆಯಲಾಗಿದೆ.
ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…