ಕುಂದಾಪುರ: ಟೈಯರ್ ಪಂಚರ್ ಶಾಪ್ ಒಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟೈಯರ್ ಸಿಡಿದು ಸ್ಪೋಟಗೊಂಡು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.
ಗಂಭೀರ ಗಾಯಗೊಂಡ ಯುವಕ ಅಬ್ದುಲ್ ರಜೀದ್ (19) ಎಂದು ತಿಳಿದುಬಂದಿದೆ.
ಖಾಸಗಿ ಶಾಲೆ ಬಸ್ಸೊಂದರ ಟೈಯರ್ ಪ್ಯಾಚ್ ಗೆಂದು ಬಂದಿದ್ದು ಟಯರನ್ನು ಕೆಳಗಿಳಿಸಿ ಗಾಳಿ ತುಂಬುವಾಗ ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡಿದೆ.
ಈ ಸಂದರ್ಭ ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಪೋಟಗೊಂಡ ಟೈಯರ್ ನ ಸಿಡಿತಕ್ಕೆ ಮೇಲಕ್ಕೆ ಎಸೆಯಲ್ಪಟ್ಟಿದ್ದಾನೆ.
ಟೈಯರ್ ಸ್ಪೋಟಗೊಂಡ ಬಳಿಕ ಟೈಯರ್ ಡ್ರಮ್ ಬಸ್ಸಿನ ಮೇಲ್ಚಾವಣಿಯ ಮೇಲೆ ಬಿದ್ದು ನೆಲಕ್ಕುರುಳಿದೆ. ಘಟನೆಯ ಎಲ್ಲಾ ದೃಶ್ಯಾವಳಿಗಳು ಸ್ಥಳೀಯ ಅಂಗಡಿಯವೊಂದರ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…