ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಕ್ರೇನ್ ವೊಂದು ಡಿಕ್ಕಿ ಹೊಡೆದು ಸಹಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆಯ ಶ್ರೀನಿವಾಸ ಕಾಂಪ್ಲೆಕ್ಸ್ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಪ್ರಶಾಂತ ಮೊಗವೀರ ಮೃತಪಟ್ಟವರು. ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಸವಾರ ದಿನೇಶ್ ಪೂಜಾರಿ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ನಿನ್ನೆ ಮಧ್ಯಾಹ್ನದ ವೇಳೆ ದಿನೇಶ್ ಪೂಜಾರಿ ಹಾಗೂ ಪ್ರಶಾಂತ್ ಅವರು ಬೈಕ್ ನಲ್ಲಿ ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದರು. ಈ ವೇಳೆ ಅದೇ ದಿಕ್ಕಿನಲ್ಲಿ ನೋಂದಣಿ ಇಲ್ಲದ ಹೊಸ ಕ್ರೇನ್ ಅನ್ನು ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದ ಅದರ ಚಾಲಕ, ಪ್ರಶಾಂತ್ ಸಹ ಸವಾರನಾಗಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬೈಕ್ ಸಮೇತ ಇಬ್ಬರು ಸವಾರರು ರಸ್ತೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ನಡೆಸಿದ ಕ್ರೇನ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ದಿನೇಶ್ ಪೂಜಾರಿ ಅವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…