Featured

ಕುಂದಾಪುರ: ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ : ಡೆತ್ ನೋಟ್ ನಲ್ಲಿ ಕಾರಣ ಬಹಿರಂಗ -Vishwanews24

ಕುಂದಾಪುರ: ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ : ಡೆತ್ ನೋಟ್ ನಲ್ಲಿ ಕಾರಣ ಬಹಿರಂಗ -Vishwanews24

ಕುಂದಾಪುರ: ತಮ್ಮ ಸ್ವಂತ ರಿವಾಲ್ವರ್ ನಲ್ಲಿ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಬಹುಕೋಟಿ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ(80) ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಡೆತ್ ನೋಟ್ ಸಿಕ್ಕಿದ್ದು, ಇದರ ಆಧಾರದಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮೊಳಹಳ್ಳಿ ಗಣೇಶ್‌ ಶೆಟ್ಟಿ ಮತ್ತು ಹಂಗಳೂರು ನಿವಾಸಿ ಇಸ್ಮಾಯಿಲ್‌ ಎಂಬವರಿಗೆ ನೀಡಿದ 3.34 ಕೋಟಿ ರೂಪಾಯಿ ನಗದು ಮತ್ತು 5 ಕೆಜಿ ಚಿನ್ನದ ವಿಚಾರವೇ ಆತ್ಮಹತ್ಯೆಗೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ.

ಡೆತ್ ನೋಡ್ ನಲ್ಲಿ ಏನಿದೆ?:

ಮೃತ ಕಟ್ಟೆ ಗೋಪಾಲಕೃಷ್ಣ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‌ ನೋಟ್‌ ಬರೆದಿಟ್ಟಿದ್ದು ಅದರಲ್ಲಿ “ತನ್ನ ಪರಿಚಯಸ್ಥರಾದ ಮೊಳಹಳ್ಳಿ ಗಣೇಶ್‌ ಶೆಟ್ಟಿ ಮತ್ತು ಹಂಗಳೂರು ನಿವಾಸಿ ಇಸ್ಮಾಯಿಲ್‌ ಎಂಬವರಿಗೆ ನೀಡಿದ 3.34 ಕೋಟಿ ರೂಪಾಯಿ ನಗದು ಮತ್ತು 5 ಕೆಜಿ ಚಿನ್ನವನ್ನು 2013 ರಲ್ಲಿ ಪಡೆದುಕೊಂಡಿದ್ದು ಇಲ್ಲಿಯ ತನಕ ಯಾವುದೇ ಅಸಲು ಮತ್ತು ಬಡ್ಡಿಯನ್ನು ಕೂಡ ನೀಡಿಲ್ಲ. ಈ ವಿಚಾರದಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಮೂಲಕ 6-7 ಬಾರಿ ಮಾತುಕತೆ ನಡೆಸಿದ್ದು, ಗಣೇಶ್‌ ಶೆಟ್ಟಿ ವಾಯಿದೆ ಕೇಳಿದ್ದು ಇದುವರೆಗೆ ಒಂದು ರೂಪಾಯಿ ಕೂಡ ನೀಡಿಲ್ಲ. ಚಿನ್ನ ಮತ್ತು ನಗದಿಗೆ ಬ್ಯಾಂಕ್‌ ಬಡ್ಡಿ ಸೇರಿಸಿದರೆ ಸುಮಾರು 9 ಕೋಟಿಗೂ ಅಧಿಕ ಮೊತ್ತವಾಗುತ್ತದೆ. ತಾನು ಇಲ್ಲಿಯ ತನಕ ಮರ್ಯಾದೆಯಿಂದ ಬಾಳಿಕೊಂಡು ಬಂದಿದ್ದು, ನಾನು ಹೊರಗಿನವರಿಗೆ ಹಣ ಕೊಟ್ಟಿದ್ದು, ಬ್ಯಾಂಕ್‌ ನಲ್ಲಿ ಸಾಲ ಇದೆ. ಗಣೇಶ್‌ ಶೆಟ್ಟಿ ಮನೆಗೆ ತಿರುಗಿ ಸಾಕಾಗಿದ್ದು ಮನಸ್ಸಿಗೆ ಬೇಸರವಾಗಿ ಅವರ ಮನೆಯಲ್ಲಿಯೇ ತನ್ನ ಸ್ವಂತ ರಿವಾಲ್ವರ್‌ ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಗಣೇಶ್‌ ಶೆಟ್ಟಿ ಮತ್ತು ಹಂಗ್ಳೂರು ಇಸ್ಮಾಯಿಲ್‌ ಅವರಿಂದ ಹಣವನ್ನು ವಸೂಲಿ ಮಾಡಿ ನನ್ನ ಮನೆಯವರಿಗೆ ನೀಡುವಂತೆ” ಕುಂದಾಪುರ ಠಾಣಾಧಿಕಾರಿಗೆ ತನ್ನ ಡೆತ್‌ ನೋಟ್‌ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago