Featured

ಕುಂದಾಪುರ: ಜಿಲ್ಲಾಡಳಿತ ಹಾಗೂ ಸರಕಾರದ ವಿರುದ್ಧ ಮುಂದುವರಿದ ಬೈಂದೂರು ಶಾಸಕರ ಧರಣಿ; ಜಿಲ್ಲೆಯ ಶಾಸಕರ ಬೆಂಬಲ – vishwanews24

ಕುಂದಾಪುರ: ಜಿಲ್ಲಾಡಳಿತ ಹಾಗೂ ಸರಕಾರದ ವಿರುದ್ಧ ಮುಂದುವರಿದ ಬೈಂದೂರು ಶಾಸಕರ ಧರಣಿ; ಜಿಲ್ಲೆಯ ಶಾಸಕರ ಬೆಂಬಲ

ಕುಂದಾಪುರ: ಜಿಲ್ಲಾಡಳಿತ ಹಾಗೂ ಸರಕಾರದ ವಿರುದ್ಧ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸೋಮವಾರ ಸಂಜೆಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ಆರಂಭಿಸಿದ ಅಹೋರಾತ್ರಿ ಧರಣಿಗೆ ಉಡುಪಿ ಜಿಲ್ಲೆಯ ಕುಂದಾಪುರ, ಕಾಪು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸೋಮವಾರ ರಾತ್ರಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿಯವರು ತಡರಾತ್ರಿ ಆಗಮಿಸಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋ‌ರ್ ಕುಮಾ‌ರ್ ಕುಂದಾಪುರ, ಬಿಜೆಪಿಯ ಹಿರಿಯ ಮುಖಂಡ ರಾಜೇಶ್ ಕಾವೇರಿ, ಬೈಂದೂರು ಬಿಜೆಪಿ‌ಮಂಡಲದ ಅಧ್ಯಕ್ಷ‌ ದೀಪಕ್ ಕುಮಾರ್ ಶೆಟ್ಟಿ, ಕುಂದಾಪುರ ಮಂಡಲದ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಗೋಪಾಡಿ ಮೊದಲಾದವರಿದ್ದರು.

ರಾತ್ರಿಯಿಡೀ ನಡೆದ ಧರಣಿ ಸತ್ಯಾಗ್ರಹದಲ್ಲಿ ಬೈಂದೂರಿನ ನೂರಾರು ಬಿಜೆಪಿ ಕಾರ್ಯಕರ್ತರು ಶಾಸಕ ಗುರುರಾಜ್ ಗಂಟಿಹೊಳೆಯವರ ಧರಣಿಗೆ ಕೈ ಜೋಡಿಸಿದರು. ಮಂಗಳವಾರವೂ ಧರಣಿ ಮುಂದುವರಿದಿದ್ದು ಡಿಸಿ ಹಾಗೂ ಎಸ್ಪಿ ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

32 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

46 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

51 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago