ಕುಂದಾಪುರ: ಜಿಲ್ಲೆಯ ವಿವಿಧ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು ಮುಂದಿನ 15-20 ದಿನಗಳ ಒಳಗೆ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕಾಲು ಸಂಕದ ಅವಶ್ಯಕತೆ ಇದೆ ಎಂದು ಮಾಹಿತಿ ಸಂಗ್ರಹಿಸಿ, ಸರ್ಕಾರದ ನಿಯಮಾವಳಿಯಲ್ಲಿ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಅಂದಾಜು 4.5 ಲಕ್ಷ ಮೊತ್ತವನ್ನು ನರೇಗಾ ಯೋಜಜೆಯಡಿಯಲ್ಲಿ ಒದಗಿಸಲು ಅವಕಾಶವಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.
ಕುಂದಾಪುರ ಪ್ರವಾಸಿ ಮಂದಿರದಲ್ಲಿ ಬುಧವಾರ ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕಾಲು ಸಂಕಗಳ ಕುರಿತು ವರದಿ ನೀಡುವಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಬೈಂದೂರಿನ ಶಿರೂರು ಹಾಗೂ ಇತರ ಭಾಗಗಳಲ್ಲಿ ಪ್ರಾಕೃತಿಕ ವಿಕೋಪಗಳ ಕಾರಣದಿಂದ ಹಾನಿಗೊಳಗಾಗಿರುವ ನಾಡ ದೋಣೆಗಳಿಗೆ ಎನ್‍ಡಿಆರ್‍ಎಫ್ ಹಾಗೂ ಸರ್ಕಾರದ ಪ್ರಾಕೃತಿಕ ವಿಕೋಪ ನಿಧಿ ನಿಯಮಾವಳಿಗಳ ಅಡಿಯಲ್ಲಿ ಕೇವಲ 4,500 ರೂ. ಮಾತ್ರ ನೀಡಲು ಅವಕಾಶವಿದ್ದು, ಅಂದಾಜು 26 ಲಕ್ಷದ ಮಾರುಕಟ್ಟೆ ಬೆಲೆಯ ದೋಣಿ ಹಾಗೂ ಬಲೆಯ ವಾಸ್ತವ ಹಾನಿಯ ಒಟ್ಟು ವಿವರಗಳನ್ನು ಪಡೆದುಕೊಂಡು ಸದ್ಯದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ವಿಷಯ ಮಂಡನೆ ಮಾಡಿ ನಾಡ ದೋಣಿ ಮೀನುಗಾರರಿಗೆ ಗರಿಷ್ಠ ಪರಿಹಾರ ನೀಡಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.
ಪ್ರವೀಣ್ ಹತ್ಯೆ ಪ್ರಕರಣ – ಇಂದು ದಕ್ಷಿಣ ಕನ್ನಡ ಎಸ್ಪಿಯಿಂದ ಮಹತ್ವದ ಸುದ್ದಿಗೋಷ್ಟಿ – Vishwanews24
ದುರಂತ ಘಟನೆ ಸಂಭವಿಸಿದ ಬಳಿಕ ಇನ್ನೂ ಮುಂದೆ ಅದೇ ರೀತಿಯ ಘಟನೆಗಳು ಪುನರಾವರ್ತನೆ ಆಗಬಾರದು ಎನ್ನುವ ಕಾರಣಕ್ಕಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಣ್ಣ ಸಣ್ಣ ನದಿ, ತೋಡು ಹಾಗೂ ಹಳ್ಳಗಳನ್ನು ದಾಟಲು ಕಾಲು ಸಂಕದ ಅವಶ್ಯಕತೆ ಎಲ್ಲೆಲ್ಲಿ ಇದೆ ಎನ್ನುವುದನ್ನು ಪರಿಶೀಲನೆ ಮಾಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದ್ದು, ನರೇಗಾ ಯೋಜನೆಯಡಿಯಲ್ಲಿ ತುರ್ತಾಗಿ ಕಾಲು ಸಂಕಗಳನ್ನು ನಿರ್ಮಿಸಲು ಅವಕಾಶ ಮಾಡಿಕೊಡಲಾಗಿದೆ ಎಂದರು.
ಮುಖ್ಯಮಂತ್ರಿಗಳೊಂದಿಗೆ ಕೇಂದ್ರದ ಮೀನುಗಾರಿಕಾ ಹಾಗೂ ಬಂದರು ಇಲಾಖೆಯ ಸಚಿವರನ್ನು ಭೇಟಿ ಮಾಡಿ ರಾಜ್ಯದ ಕರಾವಳಿ ಪ್ರದೇಶದ ಅಭಿವೃದ್ಧಿಗಾಗಿ ಪ್ರಾಸ್ತಾವನೆ ಮಾಡಿರುವ ಯೋಜನೆಗಳಲ್ಲಿ 381 ಕೋಟಿ ರೂಪಾಯಿಯ 9 ಯೋಜನೆಗಳಿಗೆ ಅನುಮೋದನೆ ದೊರೆಕಿದೆ. ಮೀನುಗಾರರಿಗೆ ಯಾವುದೇ ರೀತಿಯ ತೊಂದರೆಗಳನ್ನು ನೀಡದೆ, ಅಭಿವೃದ್ಧಿಯ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದ್ದ ಯೋಜನೆಯ ಅನುಷ್ಠಾನದ ವೇಳೆಯಲ್ಲಿ ಮೀನುಗಾರರು ಸಹಕಾರ ನೀಡಬೇಕು. ಸಮುದ್ರ ತೀರ ಪ್ರದೇಶಗಳ ರಸ್ತೆಗಳ ಅಭಿವೃದ್ಧಿ ಹಾಗೂ ಸಮುದ್ರ ತಡೆಗೋಡೆಗಳಿಗೆ ಕಲ್ಲು ಹಾಕುವ ಕಾಮಗಾರಿಗೆ ಗುರುವಾರದಿಂದಲೇ ಚಾಲನೆ ನೀಡಲಾಗುವುದು. ಪಂಜರ ಮೀನು ಕೃಷಿಗೆ ಸಂಬಂಧಿಸಿದಂತೆ ಸರ್ಕಾರದ ಕೆಲವು ನಿಯಮಗಳನ್ನು ಬದಲಾವಣೆ ಮಾಡಬೇಕು. ಕರಾವಳಿ ಹಾಗೂ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದಂತೆ ನಿಯಮಾವಳಿಗಳನ್ನು ರೂಪಿಸಲು ಕರಡು ಪ್ರತಿಯನ್ನು ತಯಾರಿಸಲಾಗಿದ್ದು, ಮೀನುಗಾರರ ಸಂಘಟನೆಯ ಪ್ರತಿನಿಧಿಗಳಿಂದ ಅಭಿಪ್ರಾಯ ಪಡೆದುಕೊಂಡು, ಸರ್ಕಾರದ ಬೊಕ್ಕಸಕ್ಕೆ ಆದಾಯ ಕ್ರೋಢಿಕರಣ ಆಗುವುದನ್ನು ಗಮನದಲ್ಲಿ ಇರಿಸಿಕೊಂಡು ನಿಯಮಾವಳಿಗಳನ್ನು ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು.
ತೀರ ಪ್ರದೇಶಗಳಲ್ಲಿ ನಡೆಸಲು ಉದ್ದೇಶಿಸಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಸಿಆರ್ ಝಡ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಪೂರ್ವಾನುಮತಿ ಪಡೆದುಕೊಳ್ಳದೆ ಇರುವುದರಿಂದ ಮಂಜೂರಾಗಿರುವ ಯೋಜನೆಗಳು ನಿರ್ದಿಷ್ಠ ಸಮಯದಲ್ಲಿ ಅನುಷ್ಠಾನಗೊಳ್ಳಲು ತೊಡಕಾಗುತ್ತಿದೆ. ನ್ಯಾಯಾಲಯದಲ್ಲಿ ಕೆಲವು ಪ್ರಕರಣಗಳು ಬಾಕಿ ಉಳಿದಿರುವುದರಿಂದ ಕೆಲವು ಯೋಜನೆಗಳು ಬಾಕಿ ಉಳಿದಿದೆ. ಮೀನುಗಾರರ ಹಾಗೂ ತೀರ ಪ್ರದೇಶವಾಸಿಗಳ ವಿಶ್ವಾಸ ತೆಗೆದುಕೊಂಡು ಅಭಿವೃದ್ಧಿ ಯೋಜನೆ ಹಾಗೂ ರಫ್ತು ಮಾರುಕಟ್ಟೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಮೀನುಗಾರಿಕಾ ಮನೆ ನೀಡುವುದು ಸೇರಿದಂತೆ ಮೀನುಗಾರರಿಗೆ ಇರುವ ಸಮಸ್ಯೆಗಳನ್ನು ಅರಿಯಲು ಅಧಿಕಾರಿಗಳೊಂದಿಗೆ ಮೀನುಗಾರರ ಬಳಿಗೆ ಬಂದು ಸಮಸ್ಯೆಯನ್ನು ಆಲಿಸಿ ಪರಿಹಾರ ಕ್ರಮ ಕೈಗೊಳ್ಳಲು ಗಮನ ಹರಿಸುತ್ತೇನೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…