Featured

ಕುಂದಾಪುರ: ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ , ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಚಿಲ್ಲರೆ ಮನೋಭಾವದ ವ್ಯಕ್ತಿ ನಾನಲ್ಲ:  ಸುಕುಮಾರ್ ಶೆಟ್ಟಿ – Vishwanews24

ಕುಂದಾಪುರ: ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ ..

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಚಿಲ್ಲರೆ ಮನೋಭಾವದ ವ್ಯಕ್ತಿ ನಾನಲ್ಲ:  ಸುಕುಮಾರ್ ಶೆಟ್ಟಿ

ಕುಂದಾಪುರ: ನಾನು ನೂರಕ್ಕೆ ನೂರು ಬಿಜೆಪಿ. ಅದರಲ್ಲಿ ಸಂಶಯವೇ ಬೇಡ. ಅವಕಾಶ ಕೊಡದಕ್ಕೆ ಬೇಸರವಿಲ್ಲ. ನನಗೆ ಇಷ್ಟೇ ಯೋಗ. ಮಾಡಿದ ಕೆಲಸಕ್ಕೆ ತೃಪ್ತಿಯಿದೆ. ಆದರೆ ಪಕ್ಷ ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ. ಬೆಂಬಲ ನೀಡುವ ಬಗ್ಗೆ ಕಾರ್‍ಯಕರ್ತರು, ಹಿತೈಷಿಗಳೊಂದಿಗೆ ಚರ್ಚಿಸಿ ಇನ್ನೆರಡು ದಿನದಲ್ಲಿ ನನ್ನ ನಿಲುವು ಏನು ಅನ್ನುವುದನ್ನು ತಿಳಿಸುವೆ ಎಂದು ಬಂದೂರಿನ ಹಾಲಿ ಶಾಸಕ, ಟಿಕೆಟ್ ವಂಚಿತ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.

ಟಿಕೆಟ್ ಕೈತಪ್ಪಿದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಇಲ್ಲ ಅನ್ನುವುದನ್ನು3 ತಿಂಗಳು ಮೊದಲೇ ಹೇಳಬಹುದಿತ್ತು. ನಡ್ಡಾ, ಸಿಎಂ ಕಾರ್‍ಯಕ್ರಮಕ್ಕೆ ಸಹಸ್ರಾರು ಮಂದಿಯನ್ನು ಸೇರಿಸಿದ್ದೇನೆ. ಜನ ಸೇರಿಸುವ ಕೆಲಸ ಅಷ್ಟು ಸುಲಭವಲ್ಲ. ಮಾಜಿ ಸಿಎಂಗಳಾದ ಹೆಚ್ಡಿಕೆ ಕರೆ ಮಾಡಿ ಬನ್ನಿ ಎಂದಿದ್ದರು. ಆದರೆ ನಾನು ಬರುವುದಿಲ್ಲ ಅಂದಿದ್ದೇನೆ. ಬಿಎಸ್‌ವೈ ಹಾಗೂ ಸಿಎಂ ಬೊಮ್ಮಾಯಿ ಕರೆ ಮಾಡಿ, ನಾವು ನಿಮ್ಮೊಂದಿಗಿದ್ದೇವೆ. ಟಿಕೆಟಿಗಾಗಿ ನಾವು ಪ್ರಯತ್ನಿಸಿದ್ದು, ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದು ತಿಳಿಸಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವಷ್ಟು ಚಿಲ್ಲರೆ ಜನ ಅಲ್ಲ. ವಿರೋಧವಂತೂ ಮಾಡುವುದಿಲ್ಲ. ಒಳ್ಳೆಯದಾಗಲಿ ಎಂದು ಹಾರೈಸುವೆ ಎಂದಿದ್ದಾರೆ.

5 ವರ್ಷ ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. 2013 ರಲ್ಲಿ ಸೋತಾಗ 15 ದಿನಗಳ ಹಿಂದೆಯಷ್ಟೇ ಟಿಕೆಟ್ ನೀಡಿದ್ದರೂ, ಹೋರಾಟ ಮಾಡಿದ್ದೇನೆ. ಆ ಬಳಿಕದ 5 ವರ್ಷ ಕ್ಷೇತ್ರದಾದ್ಯಂತ ಓಡಾಟ ಮಾಡಿ, ಪಕ್ಷವನ್ನು ಸಂಘಟಿಸಿ, ಪ್ರಬಲವಾಗಿಸಿ, ಲೋಕಸಭೆ, ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಗಳಲ್ಲಿ ಪಕ್ಷದ ಹೆಚ್ಚಿನ ಬೆಂಬಲಿತರು ಗೆಲ್ಲುವಲ್ಲಿ ಶ್ರಮಿಸಿದ್ದೇನೆ.

ಪಕ್ಷದ ಪ್ರಮುಖರಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜೆಡ್ಡು, ಹರ್ಕೂರು ಮಂಜಯ್ಯ ಶೆಟ್ಟಿ, ಆನಂದ ಖಾರ್ವಿ ಉಪ್ಪುಂದ, ಪತ್ರಿಕಾಗೋಷ್ಠಿಯಲ್ಲಿದ್ದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

10 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

18 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

18 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

18 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

18 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

18 hours ago