ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ, ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಶಿ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಉಡುಪಿಯಿಂದ ಕುಂದಾಪುರ ಕಡೆಗೆ ಶಿಲೆಕಲ್ಲು ಜಲ್ಲಿ ಸಾಗಿಸುತ್ತಿದ್ದ ಲಾರಿ, ಕುಂಭಾಶಿ ತಲುಪಿದಾಗ ಹಠಾತ್ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ವೇಗವಾಗಿ ಬಂದ ಲಾರಿ ಡಿವೈಡರ್ ಏರಿ ರಸ್ತೆಯ ವಿರುದ್ಧ ದಿಕ್ಕಿಗೆ ಚಲಿಸಿ ಕೊನೆಗೆ ರಸ್ತೆ ಪಕ್ಕದ ಹೊಂಡಗೆ ಬಿದ್ದಿದೆ.
ಇದನ್ನೂ ಓದಿ:
ಅಪಘಾತದ ತೀವ್ರತೆಗೆ ಲಾರಿ ಚಾಲಕನ ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಲಾರಿಯ ಟಯರ್ ಸಿಡಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇನ್ನು ಲಾರಿ ವಿರುದ್ಧ ದಿಕ್ಕಿನ ರಸ್ತೆಗೆ ನುಗ್ಗಿದ ಸಂದರ್ಭದಲ್ಲಿ ಎದುರಿನಿಂದ ಯಾವುದೇ ವಾಹನಗಳು ಬಾರದ ಕಾರಣ ದೊಡ್ಡ ಅಪಘಾತ ತಪ್ಪಿದಂತಾಗಿದೆ.
ಇದನ್ನೂ ಓದಿ:
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]