ಕುಂದಾಪುರ : ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಮೃತ್ಯು – Vishwanews24
ಕುಂದಾಪುರ : ಡಿವೈಡರ್ ಗೆ ಬೈಕ್ ಡಿಕ್ಕಿ – ಸವಾರ ಮೃತ್ಯು
ಕುಂದಾಪುರ : ಬೈಕೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಮೂಲತಃ ಬೈಂದೂರು ಸಮೀಪದ ನಾಗೂರಿನ ಹಾಗೂ ಪ್ರಸಕ್ತ ಕುಂದಾಪುರ ನಿವಾಸಿಯಾಗಿದ್ದ ಮುಹಮ್ಮದ್ ಫರ್ವೇಝ್(37) ಎಂದು ಗುರುತಿಸಲಾಗಿದೆ.
ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಇವರು, ಉತ್ತಮ ಕ್ರೀಡಾಪಟುವಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಗೋ ಬ್ಯಾಕ್ ಶೋಭಾ ಅಭಿಯಾನ : ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲು – Vishwanews24
ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
