ಕುಂದಾಪುರ: ಹಿಜಾಬ್ ಹಾಗೂ ಕೇಸರಿ ಶಾಲು ಧರಿಸೋ ವಿವಾದ ತಾರಕಕ್ಕೇರಿದ್ದು, ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಸಂಬಂಧ ಇಂದು ಶಾಲಾ ಆಡಳಿತ ಮಂಡಳಿ ಹಾಗೂ ಎಸ್‌ಡಿಎಂಸಿ ಸದಸ್ಯರು ಸಭೆ ನಡೆಸಿ, ಹಿಜಾಬ್, ಕೇಸರಿ ಶಾಲು ಧರಿಸಿ ಕಾಲೇಜು ಗೇಟಿನ ಒಳಗೆ ಬರಬಹುದು. ಆದ್ರೇ ತರಗತಿಯಲ್ಲಿ ಹಿಜಾಬ್, ಕೇಸರಿ ಶಾಲು ಧರಿಸಿ ಹಾಜರಾಗುವಂತಿಲ್ಲ ಎಂದು ತಿರ್ಮಾನಿಸಿದ್ದಾರೆ.
ಇಂದು ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಎಸ್ ಡಿ ಎಂ ಸಿ ಸದಸ್ಯರ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಕ್ಕಳ ಪೋಷಕರು, ಶಾಲಾ ಮುಖ್ಯೋಪಾಧ್ಯಯರು, ಉಪನ್ಯಾಸಕರು ಸೇರಿದಂತೆ ವಿವಿಧ ಮುಖಂಡರು ಹಾಜರಿದ್ದರು.
ಈ ಸಭೆಯಲ್ಲಿ ತರಗತಿ ಹೊರತುಪಡಿಸಿ, ಶಾಲಾ ಆವರಣಕ್ಕೆ ಹಿಜಾಬ್, ಕೇಸರಿ ಶಾಲು ಧರಿಸಿ ಬರೋದಕ್ಕೆ ಅವಕಾಶ ನೀಡಲಾಗುವುದು ಎಂಬ ನಿರ್ಧಾರವನ್ನು ಕೈಗೊಳ್ಳಲಾಗಿದ್ದು,ಸೋಮವಾರದಿಂದ ಕಾಲೇಜಿನ ಒಳಗೆ ಹಿಜಾಬ್, ಕೇಸರಿ ಶಾಲು ಧರಿಸಿ ಬರೋದಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಇನ್ನು ಹಿಜಾಬ್, ಕೇಸರಿ ಶಾಲು ಧರಿಸಿದವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕೂಡ ಮಾಡಲಾಗಿದ್ದು, ತರಗತಿ ಒಳಗೆ ಮಾತ್ರ ಹಿಜಾಬ್, ಕೇಸರಿ ಶಾಲು ಧರಿಸೋದಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಸಭೆಯಲ್ಲಿ ತಿರ್ಮಾನಿಸಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…