Featured

ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನಾಗರಾಜ್ , ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆ – Vishwanews24

ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನಾಗರಾಜ್ , ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆ

ಕುಂದಾಪುರ : ಕರ್ನಾಟಕ ಕಾರ್ಯನಿರತ ಸಂಘ ಉಡುಪಿ‌ ಜಿಲ್ಲಾ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆಯಾಗಿದ್ದಾರೆ.

ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು.

ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ ಕಾರ್ಯದರ್ಶಿಗಳಾಗಿ ಯೋಗೀಶ ಕುಂಭಾಶಿ ಹಾಗೂ ರಾಘವೇಂದ್ರ ಬಳ್ಕೂರು, ಕೋಶಾಧಿಕಾರಿಯಾಗಿ ಲೋಕೇಶ್ ಆಚಾರ್ಯ, ಕಾರ್ಯಕಾರಿ‌ ಸಮಿತಿ ಸದಸ್ಯರಾಗಿ ಉದಯ ಕುಮಾರ್, ಶಶಿಧರ ಹೆಮ್ಮಾಡಿ, ಮಂಜುನಾಥ ಶೆಣೈ ಜನ್ನಾಡಿ, ಸತೀಶ್ ಆಚಾರ್ಯ ಉಳ್ಳೂರು, ವಿನಯ್ ಪಾಯಸ್, ರಾಮಕೃಷ್ಣ ಹೇರಳೆ, ಶ್ರೀಕಾಂತ ಹೆಮ್ಮಾಡಿ, ಸಂತೋಷ್ ಕುಂದೇಶ್ವರ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ‌ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

ನಿರ್ಗಮಿತ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅವರು ನೂತನ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭಹಾರೈಸಿದರು.

ಈ ಸಂಘದ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜಿಲ್ಲಾ ಸಂಘದ ರಜತ ಮಹೋತ್ಸವ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

3 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

3 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

4 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

4 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

5 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

5 hours ago