ಕುಂದಾಪುರ: ಕಳೆದ ಆರು ತಿಂಗಳಿನಿಂದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಸಹೋದ್ಯೋಗಿ ವೈದ್ಯೆಯೊಬ್ಬರು ನೀಡಿದ ದೂರಿನಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ಅವರ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕುಂದಾಪುರದ ಸರ್ಕಾರೀ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿಂದಲೇ ಹಲವು ಆರೋಪಗಳಿದ್ದವು. ಇದೀಗ ತನ್ನ ಆಸ್ಪತ್ರೆಯಲ್ಲಿರುವ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆಗೆ ಕಳೆದ ಆರು ತಿಂಗಳಿನಿಂದ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಮಾನಭಂಗಕ್ಕೆ ಯತ್ನಿಸಿದ್ದಾಗಿ ಮಹಿಳಾ ವೈದ್ಯ ಗುರುವಾರ ಸಂಜೆ ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು 354, 354A, 504, 506, 509 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ವಿವರ: 32 ವರ್ಷ ಪ್ರಾಯದ ವಿವಾಹಿತ ಮಹಿಳಾ ವೈದ್ಯೆ ಕುಂದಾಪುರದ ಸಾರ್ವಜನಿಕ ತಾಲೂಕು ಆಸ್ಪತ್ರೆಯ ಎನ್,ಆರ್,ಸಿ.ವಿಭಾಗದಲ್ಲಿ ಎನ್.ಆರ್.ಎಚ್.ಎಂ ಅಡಿಯಲ್ಲಿ ವೈದ್ಯಾಧಿಕಾರಿಯಾಗಿ ಅಕ್ಟೋಬರ್ 2023ರಿಂದ ಕೆಲಸ ಮಾಡುತ್ತಿದ್ದಾರೆ. ಕರ್ತವ್ಯದ ಆರಂಭದ ದಿನಗಳಿಂದಲೇ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿರುವ ಡಾ. ರಾಬರ್ಟ್ ರೆಬೆಲ್ಲೋ ಮೊಬೈಲ್ ಮೂಲಕ ಅಶ್ಲೀಲ ಸಂಭಾಷಣೆ ಮತ್ತು ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಕರ್ತವ್ಯದ ಸಮಯ ಮುಗಿದ ಮೇಲೆ ರಾತ್ರಿ 10-11 ಗಂಟೆಯ ನಂತರದಲ್ಲಿ ಅಶ್ಲೀಲ ಮೆಸೇಜ್ಗಳನ್ನು ಕಳುಹಿಸಿ ತನ್ನೊಂದಿಗೆ ಸಹಕರಿಸು ಎಂದು ಕಿರುಕುಳ ನೀಡುತ್ತಿದ್ದ. ಕರ್ತವ್ಯದ ಸಮಯವೂ ಲಂಚ್‌ಗೆ, ಡಿನ್ನರ್‌ಗೆ ಬಾ ಎಂದು ಪೀಡಿಸಿ ಪುಸಲಾಯಿಸುತ್ತಿದ್ದು ಆತನ ಕೋರಿಕೆಗಳನ್ನು ನಿರಾಕರಿ ಸಿದ್ದರಿಂದ ಹತಾಶೆಗೊಳಗಾಗಿ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದಲ್ಲದೆ ಬಳಿಕ ಮಹಿಳೆಯ ಮೊಬೈಲ್‌ನಲ್ಲಿದ್ದ ಫೋಟೋ ವಿಡಿಯೋ ಹಾಗೂ ಮೆಸೇಜ್ ಗಳನ್ನು ಡಿಲಿಟ್ ಮಾಡುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾಗಿ ವೈದ್ಯೆ ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…