Featured

ಕುಂದಾಪುರ : ತಾ. ಆಸ್ಪತ್ರೆ ಆಡಳಿತಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ :ಪ್ರಕರಣ ದಾಖಲು – vishwanews24

ಕುಂದಾಪುರ : ತಾ. ಆಸ್ಪತ್ರೆ ಆಡಳಿತಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ  : ಪ್ರಕರಣ ದಾಖಲು

ಕುಂದಾಪುರ: ಕಳೆದ ಆರು ತಿಂಗಳಿನಿಂದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಸಹೋದ್ಯೋಗಿ ವೈದ್ಯೆಯೊಬ್ಬರು ನೀಡಿದ ದೂರಿನಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ಅವರ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕುಂದಾಪುರದ ಸರ್ಕಾರೀ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿಂದಲೇ ಹಲವು ಆರೋಪಗಳಿದ್ದವು. ಇದೀಗ ತನ್ನ ಆಸ್ಪತ್ರೆಯಲ್ಲಿರುವ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆಗೆ ಕಳೆದ ಆರು ತಿಂಗಳಿನಿಂದ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಮಾನಭಂಗಕ್ಕೆ ಯತ್ನಿಸಿದ್ದಾಗಿ ಮಹಿಳಾ ವೈದ್ಯ ಗುರುವಾರ ಸಂಜೆ ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು 354, 354A, 504, 506, 509 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ವಿವರ: 32 ವರ್ಷ ಪ್ರಾಯದ ವಿವಾಹಿತ ಮಹಿಳಾ ವೈದ್ಯೆ ಕುಂದಾಪುರದ ಸಾರ್ವಜನಿಕ ತಾಲೂಕು ಆಸ್ಪತ್ರೆಯ ಎನ್,ಆರ್,ಸಿ.ವಿಭಾಗದಲ್ಲಿ ಎನ್.ಆರ್.ಎಚ್.ಎಂ ಅಡಿಯಲ್ಲಿ ವೈದ್ಯಾಧಿಕಾರಿಯಾಗಿ ಅಕ್ಟೋಬರ್ 2023ರಿಂದ ಕೆಲಸ ಮಾಡುತ್ತಿದ್ದಾರೆ. ಕರ್ತವ್ಯದ ಆರಂಭದ ದಿನಗಳಿಂದಲೇ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿರುವ ಡಾ. ರಾಬರ್ಟ್ ರೆಬೆಲ್ಲೋ ಮೊಬೈಲ್ ಮೂಲಕ ಅಶ್ಲೀಲ ಸಂಭಾಷಣೆ ಮತ್ತು ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಕರ್ತವ್ಯದ ಸಮಯ ಮುಗಿದ ಮೇಲೆ ರಾತ್ರಿ 10-11 ಗಂಟೆಯ ನಂತರದಲ್ಲಿ ಅಶ್ಲೀಲ ಮೆಸೇಜ್ಗಳನ್ನು ಕಳುಹಿಸಿ ತನ್ನೊಂದಿಗೆ ಸಹಕರಿಸು ಎಂದು ಕಿರುಕುಳ ನೀಡುತ್ತಿದ್ದ. ಕರ್ತವ್ಯದ ಸಮಯವೂ ಲಂಚ್‌ಗೆ, ಡಿನ್ನರ್‌ಗೆ ಬಾ ಎಂದು ಪೀಡಿಸಿ ಪುಸಲಾಯಿಸುತ್ತಿದ್ದು ಆತನ ಕೋರಿಕೆಗಳನ್ನು ನಿರಾಕರಿ ಸಿದ್ದರಿಂದ ಹತಾಶೆಗೊಳಗಾಗಿ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದಲ್ಲದೆ ಬಳಿಕ ಮಹಿಳೆಯ ಮೊಬೈಲ್‌ನಲ್ಲಿದ್ದ ಫೋಟೋ ವಿಡಿಯೋ ಹಾಗೂ ಮೆಸೇಜ್ ಗಳನ್ನು ಡಿಲಿಟ್ ಮಾಡುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾಗಿ ವೈದ್ಯೆ ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

15 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

16 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago