ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.
ಮಂಗಳವಾರ ಮುಂಜಾನೆ ಸುಮಾರು 1.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ಸಂತೋಷ್ ಅವರು ಎಂದಿನಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ.
ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳು, ಫ್ರಿಜ್‌ಗಳು, ಪೀಠೋಪಕರಣಗಳು ಸೇರಿದಂತೆ ಅಂಗಡಿಯಲ್ಲಿದ್ದ ಬಹುತೇಕ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಅಗ್ನಿ ಅವಘಡದಿಂದ 40 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅಂಗಡಿಯಲ್ಲಿದ್ದ ಮೂರುಕ್ಕೂ ಹೆಚ್ಚು ಫ್ರಿಜ್‌ಗಳಲ್ಲಿ ಒಂದರಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗ್ನಿ ನಂದಿಸುವ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…
ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…
7 ಮಂದಿಯ ಭೀಕರ ಹತ್ಯೆ : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್ ಕೇಸ್ ಬಗ್ಗೆ ಪೊಲೀಸ್ ಆಯುಕ್ತರ ಹೇಳಿಕೆ ಬೆಂಗಳೂರು:…
ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…
ಗಂಗೊಳ್ಳಿ: ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು ಗಂಗೊಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್ – ಹೆಂಡತಿ ಮೇಲಿನ ಸಿಟ್ಟಿಗೆ ಪತಿ ಏಳು ಜನರ ಕೊಲೆ ನಂದಿಬೆಟ್ಟದ ಕಾಡಿನಲ್ಲಿ…