ಕುಂದಾಪುರ: ಹೆಮ್ಮಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಹುಂಡಿಯ ಹಣವನ್ನು ಕದ್ದ ಕಳ್ಳ, ಅದನ್ನು ಸಮೀಪದ ಶಾಲೆಯೊಂದರಲ್ಲಿ ಬಿಟ್ಟು ಹೋಗಿರುವುದು ಸೋಮವಾರ ಸಂಜೆ ಪತ್ತೆಯಾಗಿದೆ.
ಸೋಮವಾರ ದೇಗುಲದಲ್ಲಿ ಸತ್ಯನಾರಾಯಣ ಪೂಜೆ ನಡೆದಿದ್ದು, ಹಣ ಪತ್ತೆಯಾಗಿದ್ದು ಪವಾಡ ಎಂದು ಸ್ಥಳೀಯರು ತಿಳಿಸಿದ್ದಾರೆ.
ದೇವಸ್ಥಾನದ ಅರ್ಚಕರ ಕಚೇರಿಯಿಂದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಜೊತೆಗೆ ಪಕ್ಕದ ಮೂರು ಮನೆಗಳಲ್ಲಿ ಅಲ್ಪಸ್ವಲ್ಪ ಹಣವನ್ನೂ ಕದ್ದಿದ್ದಾನೆ.
ದೇವಸ್ಥಾನದ ಸಮೀಪದಲ್ಲಿರುವ ಹೆಮ್ಮಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಶನಿವಾರವೇ ಶಾಲೆಯ ವರಾಂಡದಲ್ಲಿ ಹಸಿರು ಚೀಲವೊಂದನ್ನು ಗಮನಿಸಿದ್ದಾರೆ. ಆದರೆ, ಅವರು ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಬಳಿಕ ಸೋಮವಾರವೂ ಅದೇ ಸ್ಥಳದಲ್ಲಿ ಬ್ಯಾಗ್ ಬಿದ್ದಿದ್ದರಿಂದ ಕುತೂಹಲಗೊಂಡ ವಿದ್ಯಾರ್ಥಿಗಳು ಅದನ್ನು ತೆರೆದು ನೋಡಿದ್ದಾರೆ. ಈ ವೇಳೆ ಬ್ಯಾಗ್‌ನಲ್ಲಿ ಹಣ ಪತ್ತೆಯಾಗಿದೆ.
ಶಾಲೆಯ ಮುಖ್ಯ ಶಿಕ್ಷಕರು ದೇವಸ್ಥಾನದ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮಧ್ಯಾಹ್ನ ಸ್ಥಳಕ್ಕೆ ಪಿಎಸ್ ಐ ಪುಷ್ಪಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹಣ ಜಪ್ತಿ ಮಾಡಿದ್ದಾರೆ. ಬಳಿಕ ಹಣವನ್ನು ದೇವಸ್ಥಾನಕ್ಕೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.
ಕಳ್ಳ ಒಟ್ಟು 45,000 ರೂ.ನಗದನ್ನು ಕದ್ದೊಯ್ದಿದ್ದ. ಆದರೆ ಬ್ಯಾಗ್ ನಲ್ಲಿ ಕೇವಲ 3,035 ರೂ. ಹಣ ಪತ್ತೆಯಾಗಿದೆ. ಕಳ್ಳ ಉಳಿದ ಹಣವನ್ನು ಬೇರೆಡೆ ಇಟ್ಟಿರಬಹುದು ಎಂದು ಶಂಕಿಸಲಾಗಿದೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…