Featured

ಕುಂದಾಪುರ: ದೇವಸ್ಥಾನದಿಂದ ಗೋ ಕಳವಿಗೆ ವಿಫಲ ಯತ್ನ – vishwanews24

ಕುಂದಾಪುರ: ದೇವಸ್ಥಾನದಿಂದ ಗೋ ಕಳವಿಗೆ ವಿಫಲ ಯತ್ನ

ಕುಂದಾಪುರ: ಗೋ ಕಳ್ಳತನಕ್ಕೆ ಯತ್ನಿಸಿ ವಿಫಲವಾದ ಘಟನೆ ಕುಂದಾಪುರದ ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ವೇಳೆಗೆ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು ಬದಿಯ ಬಾಗಿಲ ಮೂಲಕ ಒಳ ನುಗ್ಗಿದ್ದಾರೆ. ಬಳಿಕ 3 ಗೋಗಳ ಹಗ್ಗವನ್ನು ಕತ್ತಿಯಿಂದ ತುಂಡರಿಸಿ ಸಾಗಾಟಕ್ಕೆ ಯತ್ನಿಸಿದ್ದರು.

ಕಮಲಶಿಲೆ ದೇವಸ್ಥಾನದಲ್ಲಿ ಸೈನ್‌ ಇನ್‌ ಸೆಕ್ಯುರಿಟೀಸ್‌ ಸಂಸ್ಥೆಯ ಲೈವ್‌ ಮಾನಿಟರಿಂಗ್‌ ಸಿಸಿಟಿವಿ ಹಾಕಿಸಲಾಗಿದೆ. ಈ ಸಂಸ್ಥೆ 24 ತಾಸು ಸಿಸಿಟಿವಿ ಮೇಲೆ ನೇರ ನಿಗಾ ಇಟ್ಟು ಪೊಲೀಸ್‌ ಇಲಾಖೆಗೆ ಇಂತಹ ಕಳ್ಳತನ, ಅನುಮಾನಾಸ್ಪದ ವ್ಯಕ್ತಿಗಳ ಓಡಾಟ, ಸಂಶಯಾಸ್ಪದ ಚಟುವಟಿಕೆಗಳ ಮಾಹಿತಿಯನ್ನು ಕೂಡಲೇ ರವಾನಿಸುತ್ತದೆ. ಹೀಗೆ ಗೋ ಕಳ್ಳತನ ನಡೆಯುವ ರಾತ್ರಿ ಸೈನ್‌ ಇನ್‌ ಸಿಸಿಟಿವಿ ತಂಡ ಕಳ್ಳತನದ ಮಾಹಿತಿಯನ್ನು ಬೀಟ್‌ ಪೊಲೀಸ್‌, ಎಸ್‌ಐ, ದೇವಾಲಯದ ಭದ್ರತಾ ವಿಭಾಗದವರಿಗೆ ರವಾನಿಸಿದೆ.

ಭದ್ರತಾ ವಿಭಾಗ ದವರು ಕೂಡಲೇ ಗೋಶಾಲೆಗೆ ತೆರಳಿದ್ದು, ಆ ವೇಳೆಗೆ ಶಂಕಿತರು ಸ್ಥಳದಿಂದ ಪರಾರಿಯಾಗಿದ್ದರು. ನಾಪತ್ತೆ ಯಾಗಿದ್ದ ಒಂದು ದನ ದೇವಸ್ಥಾನದ ಬಳಿ ಪತ್ತೆಯಾಗಿದ್ದು, ಉಳಿದೆಲ್ಲಾ ಗೋಗಳು ದೇವಸ್ಥಾನದಲ್ಲೇ ಸುರಕ್ಷಿತವಾಗಿದ್ದವು. ಇನ್ನು ಎಸ್‌ಐ ಹಾಗೂ ಕುಂದಾಪುರ ಡಿವೈಎಸ್‌ಪಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

11 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

11 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago