ಉಡುಪಿ

ಕುಂದಾಪುರ: ದೋಣಿ ದುರಂತ : ಇಂದು ಇಬ್ಬರ ಮೃತದೇಹ ಪತ್ತೆ : ಇನ್ನೋರ್ವ ಮೀನುಗಾರನಿಗೆ ಶೋಧ

ಕುಂದಾಪುರ: ಭಾನುವಾರ ಬೈಂದೂರು ತಾಲೂಕಿನ ಕೊಡೆರಿಯಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಈವರೆಗೆ ಮೂವರ ಶವ ಪತ್ತೆಯಾಗಿದೆ.

ಭಾನುವಾರ ಮಧ್ಯಾಹ್ನ ಘಟನೆ ನಡೆದ ತಕ್ಷಣವೇ ನಾಪತ್ತೆಯಾದ ಮೀನುಗಾರರ ಹುಡುಕಾಟದಲ್ಲಿ ಸ್ಥಳೀಯ ಮೀನುಗಾರರು, ಕರಾವಳಿ ಕಾವಲು ಪಡೆ ಪೊಲೀಸರು ಬಹಳಷ್ಟು ಶ್ರಮಿಸಿದ್ದರು. ಸೋಮವಾರ ಬೆಳಿಗ್ಗೆ ಕಿರಿಮಂಜೇಶ್ವರ ಹೊಸಹಿತ್ಲು ಬಳಿ ಕಡಲ‌ಕಿನಾರೆಯಲ್ಲಿ ಮೀನುಗಾರ ನಾಗ ಎನ್ನುವರ ಮೃತದೇಹ ಪತ್ತೆಯಾಗಿತ್ತು. ಸೋಮವಾರ ಮಧ್ಯಾಹ್ನದ ಬಳಿಕ ಮಂಗಳೂರಿನಿಂದ ಕೋಸ್ಟ್ ಗಾರ್ಡ್ ಬೋಟ್ ಆಗಮಿಸಿ ನಾಪತ್ತೆಯಾದವರ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದರು. ಸೋಮವಾರ ರಾತ್ರಿ ವೇಳೆ ಎರಡು ಶವಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದ್ದು ಶೇಖರ್ ಖಾರ್ವಿ ಹಾಗೂ ಲಕ್ಷ್ಮಣ ಖಾರ್ವಿ ಅವರ ಮೃತದೇಹ ಎನ್ನಲಾಗಿದೆ.

ಇನ್ನು ನಾಪತ್ತೆಯಾದ ನಾಲ್ವರ ಪೈಕಿ ಮೂವರು ಶವವಾಗಿ ಪತ್ತೆಯಾದರೆ ಮಂಜುನಾಥ್ ಖಾರ್ವಿಗಾಗಿ ಹುಡುಕಾಟ ಮುಂದುವರಿಯಲಿದೆ

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

3 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

4 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

5 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

6 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

6 hours ago