Categories: ಉಡುಪಿ

ಕುಂದಾಪುರ: ದೋಣಿ ದುರಂತ ಪ್ರಕರಣ : ಕುಟುಂಬಕ್ಕೆ ಸರಕಾರದಿಂದ ಗರಿಷ್ಟ ಪ್ರಮಾಣದ ಪರಿಹಾರ ನೀಡಲು ಮನವಿ : ಯಶಪಾಲ್ ಸುವರ್ಣ -Vishwanews24

ಕುಂದಾಪುರ: ಭಾನುವಾರದಂದು ಕೊಡೇರಿ ದೋಣಿ ದುರಂತ ಪ್ರಕರಣ ನಡೆದ ಕೊಡೇರಿ ಬಂದರು ಸಮೀಪದ ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಸೋಮವಾರ ಮಧ್ಯಾಹ್ನ ಭೇಟಿ ನೀಡಿ ಸ್ಥಳೀಯ ಮೀನುಗಾರರು‌ ಮತ್ತು ಮೀನುಗಾರ ಮುಖಂಡರಿಂದ ಮಾಹಿತಿ ಪಡೆದರು.

ಈ ಸಂದರ್ಭ ಮಾತನಾಡಿದ ಅವರು, ಕೊರೋನಾ ಮಹಾಮಾರಿಯ ಪಿಡುಗಿನ ವೇಳೆಯಿಂದ ಬಾರೀ‌ ಸಂಕಷ್ಟದಲ್ಲಿರುವ ಮೀನುಗಾರರಿಗೆ ನಿನ್ನೆ ನಡೆದ ಘಟನೆ ಮತ್ತೊಂದು‌ ಹೊಡೆತ ನೀಡಿದೆ. ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದ ವೇಳೆ ಕೊಡೇರಿಯಲ್ಲಿ ನಡೆದ ಈ ಘಟನೆ ನೋವುಂಟು‌ ಮಾಡಿದ್ದು ಶಾಸಕರು ಹಾಗೂ ಸಚಿವರ ಬಳಿ ಮಾತನಾಡಿ ಮೃತ ಮೀನುಗಾರರ ಕುಟುಂಬಕ್ಕೆ ಸರಕಾರದಿಂದ ಗರಿಷ್ಟ ಪ್ರಮಾಣದ ಪರಿಹಾರ ನೀಡಲು ಮನವಿ ಮಾಡಲಾಗುತ್ತದೆ. ಕರಾವಳಿ ಭಾಗದ ಅಷ್ಟೂ ಜೆಟ್ಟಿಗಳನ್ನು ಅಭಿವೃದ್ದಿಗೊಳಿಸಿ ಸರ್ವ ಋತು ಬಂದರು ನಿರ್ಮಾಣಗೊಳಿಸಿದಲ್ಲಿ ಇಂತಹ ಅವಘಡಗಳನ್ನು ತಪ್ಪಿಸಿ ಮೀನುಗಾರರು ನೆಮ್ಮದಿಯಿಂದಿರಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

ಪ್ರವಾಸದಲ್ಲಿರುವ ಮೀನುಗಾರಿಕಾ ಸಚಿವರು ಒಂದೆರಡು ದಿನದಲ್ಲಿ ಇಲ್ಲಿನ ‌ಜೆಟ್ಟಿ ಹಾಗೂ ಮೃತ ‌ಮೀನುಗಾರರ ಮನೆಗಳಿಗೆ ಭೇಟಿ ನೀಡಲಿದ್ದು ಈ ವೇಳೆ ಮೀನುಗಾರ‌ ಮುಖಂಡರು ಹಾಗೂ ಇಲಾಖಾಧಿಕಾರಿಗಳ ಸಭೆ ನಡೆಸಿ ಶಾಶ್ವತ ಕ್ರಮದ ಬಗ್ಗೆ ಚರ್ಚಿಸಲಾಗುವುದು. ಗಂಗೊಳ್ಳಿ ಹಾಗೂ ಬೈಂದೂರು ವಲಯದಲ್ಲಿ ಶೇಖಡಾ 80 ರಷ್ಟು ಮಂದಿ ದೋಣಿಗಳ ಮೂಲಕ ಮೀನುಗಾರಿಕೆ ನಡೆಸುತ್ತಿದ್ದು ಅವರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಗರಿಷ್ಟ ಅನುದಾನ ತರುವಲ್ಲಿ ಸ್ಥಳೀಯ ಸಂಸದ ಬಿ.ವೈ ರಾಘವೇಂದ್ರ ಅವರು ಮುತುವರ್ಜಿ ವಹಿಸುತ್ತಿದ್ದಾರೆ.

ಕೊರೋನದಿಂದಾಗಿ ಬಹಳಷ್ಟು ಮಂದಿ ಉದ್ಯೋಗವನ್ನು ಕಳೆದುಕೊಂಡಿದ್ದು ಮೀನುಗಾರಿಕೆಯಲ್ಲಿ ವಿಫುಲ ಅವಕಾಶಗಳಿರುವ ಹಿನ್ನೆಲೆ ಅನುದಾನ ಹೆಚ್ಚಿಸಿದಲ್ಲಿ ಸಹಕಾರಿಯಾಗಲಿದೆ ಎಂದ ಅವರು ಕೊಡೇರಿ ದೋಣಿ ದುರಂತ ಪ್ರಕರಣದಲ್ಲಿ ನೊಂದ ಮೀನುಗಾರರ ಕುಟುಂಬಕ್ಕೆ ಸರಕಾರದ ಜೊತೆ ವೈಯಕ್ತಿಕವಾಗಿ ಹಾಗೂ ಸಂಘಸಂಸ್ಥೆಗಳು ಜೊತೆಯಾಗಿರಲಿದೆ ಎಂದರು.

ಈ ಸಂದರ್ಭ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿಯಮಿತ ಮಂಗಳೂರು ಇದರ ನಾಮನಿರ್ದೇಶಕ ಸದಾನಂದ ಬಳ್ಕೂರು, ನಾಡ ದೋಣಿ ಸಂಘ ಬೈಂದೂರು ವಲಯದ ಅಧ್ಯಕ್ಷ ಆನಂದ ಖಾರ್ವಿ, ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ ಮೊದಲಾದವರಿದ್ದರು.

 

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

33 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

45 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago