Featured

ಕುಂದಾಪುರ: ನಮ್ಮದು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಗಾಂಧೀಜಿಯವರ ಪೀಳಿಗೆ : ವಿನಯ್ ಕುಮಾರ್ ಸೊರಕೆ  – Vishwanews24

ಕುಂದಾಪುರ: ನಮ್ಮದು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಗಾಂಧೀಜಿಯವರ

ಪೀಳಿಗೆ : ವಿನಯ್ ಕುಮಾರ್ ಸೊರಕೆ

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ

ಕುಂದಾಪುರ: ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್‍ನ ಕೊಡುಗೆ ಅಪಾರ. ನಮ್ಮದು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಗಾಂಧೀಜಿಯವರ ಪೀಳಿಗೆ. ಆದರೆ ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದ ಹಿನ್ನೆಲೆಯವರು ಮತ್ತು ಮಹಾತ್ಮ ಗಾಂಧೀಜಿಯವರನ್ನು ಗುಂಡಿಟ್ಟು ಕೊಂದ ಗೋಡ್ಸೆ ತತ್ವ ಮೆಚ್ಚುವ ಪಕ್ಷದವರು ಸ್ವಾತಂತ್ರ್ಯೋತ್ಸವದ ಕುರಿತಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮ ಎಷ್ಟು ಪ್ರಸ್ತುತ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪ್ರಶ್ನಿಸಿದರು.

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ನೇರಳಕಟ್ಟೆಯಿಂದ ತಲ್ಲೂರುವರೆಗೆ ಬುಧವಾರ ನಡೆದ ಪಾದಯಾತ್ರೆಯ ಬಳಿಕ ತಲ್ಲೂರಿನ ಮೂರ್ತೆದಾರರ ಸಭಾ ಭವನದಲ್ಲಿ ನಡೆದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

 

ಸ್ವಾತಂತ್ರ್ಯದ 75ನೇ ಅಮೃತಮಹೋತ್ಸವದ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಇತಿಹಾಸವನ್ನು ನೆನಪಿಸಿಕೊಳ್ಳುವ ಜೊತೆಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ಸ್ಮರಣೆ ಕೂಡ ಮಾಡಬೇಕು. ನೇರವಾಗಿ ಜನರನ್ನು ತಲುಪಲು ಪಾದಯಾತ್ರೆಯಿಂದ ಮಾತ್ರ ಸಾಧ್ಯ ಎಂಬುವುದನ್ನು ಮಹಾತ್ಮ ಗಾಂಧೀಜಿಯವರು ತೋರಿಸಿಕೊಟ್ಟಿದ್ದು, ಅವರ ತತ್ವದಲ್ಲಿ ಶಾಂತಿ, ಸಹಬಾಳ್ವೆ, ಸೌಹಾರ್ದಕ್ಕಾಗಿ ಈ ಪಾದಯಾತ್ರೆ ನಡೆಸುತ್ತಿದ್ದೇವೆ. ಪ್ರತಿಯೊಬ್ಬರೂ ವಿವಿಧತೆಯಲ್ಲಿ ಏಕತೆಯ ನಡುವೆ ಎಲ್ಲರೂ ಸಮಾನರು ಎಂಬುದನ್ನು ಮನಗಾಣಬೇಕು. ದ್ವೇಷದ ಮನೋಭಾವನೆ ಬಿಟ್ಟು ಪ್ರೀತಿಯ ಮನೋಭಾವನೆಯೊಂದಿಗೆ ಸಮಾಜದೊಳಗಿನ ಕಂದಕ ಸರಿಪಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.

ಪ್ರವೀಣ್​ ​ ಹತ್ಯೆ ಪ್ರಕರಣ – ಇಂದು ದಕ್ಷಿಣ ಕನ್ನಡ ಎಸ್ಪಿಯಿಂದ ಮಹತ್ವದ ಸುದ್ದಿಗೋಷ್ಟಿ – Vishwanews24

ದೇಶದಲ್ಲಿ ವಿವಿಧ ಧರ್ಮ, ಜಾತಿ, ಭಾಷೆಗಳಿದ್ದರೂ ಅಂಬೇಡ್ಕರ್ ಕೊಟ್ಟ ಸಂವಿಧಾನದ ಆಶಯದಂತೆ ಇವುಗಳ ನಡುವಿನ ಗೋಡೆ ಒಡೆದು ಸಾಮಾಜಿಕ ನ್ಯಾಯದ ಕಡೆಗೆ ಮುಖಮಾಡಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಕ್ರಾಂತಿಕಾರಿ ಹೆಜ್ಜೆಯಿಟ್ಟಿದ್ದು ಬದುಕು ಕಟ್ಟಿಕೊಡುವ ಕಾರ್ಯಕ್ರಮ ರೂಪಿಸಿದೆ. ಆದರೆ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುಂದಿರಿಸಿಕೊಂಡು ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದೆ.

ಬೃಹತ್ ಪಾದಯಾತ್ರೆ:

ನೇರಳಕಟ್ಟೆ-ಕರ್ಕುಂಜೆ ಮೂಲಕ ಮಾವಿನಕಟ್ಟೆ, ಕರ್ಕಿ, ಹಟ್ಟಿಯಂಗಡಿ ಮಾರ್ಗವಾಗಿ ತಲ್ಲೂರಿನತ್ತ ಪಾದಯಾತ್ರೆ ಸಾಗಿಬಂದಿದ್ದು ನಿರೀಕ್ಷೆಗೂ ಮೀರಿ ಕಾರ್ಯಕರ್ತರು ಪಾಲ್ಗೊಂಡರು. ಕಾಲುನೋವಿನಲ್ಲೂ ಕೂಡ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ಕಾರ್ಯಕರ್ತರು ಗೋಪಾಲ ಪೂಜಾರಿಯವರಿಗೆ ಜೈಕಾರ ಹಾಕಿ ಹುರಿದುಂಬಿಸಿದರು. ತಲ್ಲೂರು ಪೇಟೆಯಲ್ಲಿ ಪಾದಯಾತ್ರೆ ಸಮಾಪನಗೊಂಡ ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಜಿಲ್ಲೆಯ 10 ಬ್ಲಾಕ್‍ಗಳಲ್ಲಿ ನಡೆದ ಪಾದಯಾತ್ರೆಯ ಸಮಾರೋಪ ತಲ್ಲೂರಿನಲ್ಲಿ ಸಮಾಪ್ತಿಗೊಂಡಿತು. 10 ಬ್ಲಾಕ್ ಗೆ ಹೋಲಿಸಿದರೆ ವಂಡ್ಸೆ ಬ್ಲಾಕ್ ವ್ಯಾಪ್ತಿಯಲ್ಲಿ ನಡೆದ ಪಾದಯಾತ್ರೆಯಲ್ಲಿ ಬಹಳಷ್ಟು ಜನರು ಪಾಲ್ಗೊಂಡಿದ್ದರು.

ಕುಂದಾಪುರ : ಜಿಲ್ಲೆಯಲ್ಲಿ ಎಲ್ಲೆಲ್ಲಿ ಕಾಲು ಸಂಕದ ಅವಶ್ಯಕತೆ ಅವಶ್ಯಕತೆ ಇದೆ ಎಂದು ಮಾಹಿತಿ ಸಂಗ್ರಹಿಸಿ : ಸಚಿವ ಅಂಗಾರ ಸೂಚನೆ – Vishwanews24

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

45 minutes ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

1 hour ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

1 hour ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

2 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

6 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

6 hours ago