ಕುಂದಾಪುರ : ರಿಕ್ಷಾವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಗೋಡು ಸಮೀಪ ತಡರಾತ್ರಿ ನಡೆದಿದೆ. ಕುಂದಾಪುರದ ನಿವಾಸಿ ಭಾಸ್ಕರ (33) ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ದುರ್ದೈವಿ.
ಭಾನುವಾರ ತಡರಾತ್ರಿ ಮೊವಾಡಿ-ತ್ರಾಸಿ ರಸ್ತೆಯಲ್ಲಿ ರಿಕ್ಷಾ ಚಾಲಕ ಗುರುರಾಜ ಅತೀ ವೇಗದಲ್ಲಿ ಆಟೋ ರಿಕ್ಷಾವನ್ನು ಚಲಾಯಿಸಿದ್ದು ಹಠಾತ್ತನೆ ಬ್ರೇಕ್ ಅದುಮಿದ ಪರಿಣಾಮ ಆಟೋರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೆಂಗಿನ ಮರಕ್ಕೆ ಢಿಕ್ಕಿಯಾಗಿದೆ.
ಆಟೋರಿಕ್ಷಾ ಹಿಂಬದಿ ಕುಳಿತ ಭಾಸ್ಕರ್ ಅವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯರ ಜೊತೆಗೂಡಿ ಗಂಗೊಳ್ಳಿಯ ಆಪತ್ಭಾಂಧವ ಇಬ್ರಾಹಿಂ ಗಂಗೊಳ್ಳಿ ಅವರು ತಮ್ಮ ಆಂಬುಲೆನ್ಸ್ ಮೂಲಕ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.
ರಿಕ್ಷಾ ಚಾಲಕ ಗುರುರಾಜ ಪೂಜಾರಿ ಅವರಿಗೂ ಗಾಯಗಳಾಗಿದ್ದು ಆಸಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…