ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ನಿರೀಕ್ಷೆಗೂ ಮೀರಿ ಕಡಿಮೆ ಅಂಕ ಬಂತೆಂಬ ಕಾರಣಕ್ಕೆ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಸಾಯೀಶ್ ಶೆಟ್ಟಿ ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದ ಕಾಲೇಜು ಸಮೀಪದ ಅರಬ್ಬೀ ಸಮುದ್ರದಲ್ಲಿ ಪತ್ತೆಯಾಗಿದೆ.
ಹೆಬ್ರಿಯ ನವೋದಯದಲ್ಲಿ ಹತ್ತನೇ ತರಗತಿ ಓದಿದ್ದ ಸಾಯೀಶ್ ಶೆಟ್ಟಿ, ಶಿವಮೊಗ್ಗದಲ್ಲಿ ದ್ವಿತೀಯ ಪಿಯು ಮಾಡುತ್ತಿದ್ದ. ಯಾವುದೇ ಕೋಚಿಂಗ್ ಇಲ್ಲದೇ ನೀಟ್ ಪರೀಕ್ಷೆ ಬರೆದಿದ್ದ. ಮೆಡಿಕಲ್ ಓದಬೇಕು ಎನ್ನುವ ಹಠ ಮನಸ್ಸಿನಲ್ಲಿತ್ತು.
ರಘುವೀರ್ ಶೆಟ್ಟಿಯ ಒಬ್ಬನೇ ಗಂಡುಮಗ ಸಾಯೀಶ್ ಮನನೊಂದು ನಿನ್ನೆ ಹೇರಿಕುದ್ರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ನಿನ್ನೆಯಿಡೀ ಸಾಯೀಶ್ ಗಾಗಿ ಶೋಧ ನಡೆದಿತ್ತು. ಕೊನೆಗೂ ನಾವುಂದದಲ್ಲಿ ಮೃತ ದೇಹ ಪತ್ತೆಯಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೋಟರಿ ಸಮುದಾಯ ದಳ ಪಾದೂರು ಇದರ ನೂತನ ಪ್ರತಿನಿಧಿಯಾಗಿ ಯುವ ಉದ್ಯಮಿ ಪ್ರಸಾದ್ ಆಚಾರ್ಯ ಆಯ್ಕೆ – Vishwanews24
ಸೇತುವೆ ಮೇಲಿಂದ ಯುವಕನೊರ್ವ ನದಿಗೆ ಹಾರುತ್ತಿರುವುದನ್ನು ಗಮನಿಸಿದ ವಾಹನ ಸವಾರರು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ಮುಳುಗು ತಜ್ಞರು ಹಾಗೂ ಸ್ಥಳೀಯರ ಸಹಾಯದಿಂದ ನಾಪತ್ತೆಯಾಗಿರುವ ವಿದ್ಯಾರ್ಥಿಯ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಬುಧವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ನದಿ ನೀರಿನ ಹರಿವು ಹೆಚ್ಚಿದ್ದು, ನೀರಿನ ಮಟ್ಟ ಜಾಸ್ತಿ ಇರುವುದರಿಂದ ಹಾಗೂ ಮಳೆ ಸುರಿಯುತ್ತಿರುವುದರಿಂದ ಶೋಧ ಕಾರ್ಯಾಚರಣೆಗೆ ತೊಡಕಾಗಿದ್ದು, ಶುಕ್ರವಾರ ಬೆಳಿಗ್ಗೆಯಿಂದ ಶೋಧ ಕಾರ್ಯಾಚರಣೆ ಮತ್ತೆ ಮುಂದುವರೆಸಲಾಗಿತ್ತು. ಕೊನೆಗೂ ನಾವುಂದದಲ್ಲಿ ಮೃತ ದೇಹ ಪತ್ತೆಯಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…