Featured

ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ‌ ಅಂಕ – ಮನನೊಂದು ಸೇತುವೆಯಿಂದ‌ ನದಿಗೆ ಜಿಗಿದ ವಿದ್ಯಾರ್ಥಿಯ ಮೃತದೇಹ ನಾವುಂದ ಸಮುದ್ರ ತೀರದಲ್ಲಿ ಪತ್ತೆ – Vishwanews24

ಕುಂದಾಪುರ : ‘ನೀಟ್ ಪರೀಕ್ಷೆಯಲ್ಲಿ ಕಡಿಮೆ‌ ಅಂಕ – ಮನನೊಂದು ಸೇತುವೆಯಿಂದ‌ ನದಿಗೆ ಜಿಗಿದ ವಿದ್ಯಾರ್ಥಿಯ ಮೃತದೇಹ ನಾವುಂದ ಸಮುದ್ರ ತೀರದಲ್ಲಿ ಪತ್ತೆ

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ನಿರೀಕ್ಷೆಗೂ ಮೀರಿ ಕಡಿಮೆ ಅಂಕ ಬಂತೆಂಬ ಕಾರಣಕ್ಕೆ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಸಾಯೀಶ್ ಶೆಟ್ಟಿ ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದ ಕಾಲೇಜು ಸಮೀಪದ ಅರಬ್ಬೀ ಸಮುದ್ರದಲ್ಲಿ ಪತ್ತೆಯಾಗಿದೆ.

ಹೆಬ್ರಿಯ ನವೋದಯದಲ್ಲಿ ಹತ್ತನೇ ತರಗತಿ ಓದಿದ್ದ ಸಾಯೀಶ್ ಶೆಟ್ಟಿ, ಶಿವಮೊಗ್ಗದಲ್ಲಿ ದ್ವಿತೀಯ ಪಿಯು ಮಾಡುತ್ತಿದ್ದ. ಯಾವುದೇ ಕೋಚಿಂಗ್ ಇಲ್ಲದೇ ನೀಟ್ ಪರೀಕ್ಷೆ ಬರೆದಿದ್ದ. ಮೆಡಿಕಲ್ ಓದಬೇಕು ಎನ್ನುವ ಹಠ ಮನಸ್ಸಿನಲ್ಲಿತ್ತು.

ರಘುವೀರ್ ಶೆಟ್ಟಿಯ ಒಬ್ಬನೇ ಗಂಡುಮಗ ಸಾಯೀಶ್ ಮನನೊಂದು ನಿನ್ನೆ ಹೇರಿಕುದ್ರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ನಿನ್ನೆಯಿಡೀ ಸಾಯೀಶ್ ಗಾಗಿ ಶೋಧ ನಡೆದಿತ್ತು. ಕೊನೆಗೂ ನಾವುಂದದಲ್ಲಿ ಮೃತ ದೇಹ ಪತ್ತೆಯಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೋಟರಿ ಸಮುದಾಯ ದಳ ಪಾದೂರು ಇದರ ನೂತನ ಪ್ರತಿನಿಧಿಯಾಗಿ ಯುವ ಉದ್ಯಮಿ ಪ್ರಸಾದ್ ಆಚಾರ್ಯ ಆಯ್ಕೆ – Vishwanews24

ಸೇತುವೆ ಮೇಲಿಂದ ಯುವಕನೊರ್ವ ನದಿಗೆ ಹಾರುತ್ತಿರುವುದನ್ನು ಗಮನಿಸಿದ ವಾಹನ ಸವಾರರು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ಮುಳುಗು ತಜ್ಞರು ಹಾಗೂ ಸ್ಥಳೀಯರ ಸಹಾಯದಿಂದ ನಾಪತ್ತೆಯಾಗಿರುವ ವಿದ್ಯಾರ್ಥಿಯ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಬುಧವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ನದಿ ನೀರಿನ ಹರಿವು ಹೆಚ್ಚಿದ್ದು, ನೀರಿನ ಮಟ್ಟ ಜಾಸ್ತಿ ಇರುವುದರಿಂದ ಹಾಗೂ ಮಳೆ ಸುರಿಯುತ್ತಿರುವುದರಿಂದ ಶೋಧ ಕಾರ್ಯಾಚರಣೆಗೆ ತೊಡಕಾಗಿದ್ದು, ಶುಕ್ರವಾರ ಬೆಳಿಗ್ಗೆಯಿಂದ‌ ಶೋಧ ಕಾರ್ಯಾಚರಣೆ ಮತ್ತೆ ಮುಂದುವರೆಸಲಾಗಿತ್ತು. ಕೊನೆಗೂ ನಾವುಂದದಲ್ಲಿ ಮೃತ ದೇಹ ಪತ್ತೆಯಾಗಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

8 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

9 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

9 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

10 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

10 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago