ಕುಂದಾಪುರ : ಪತ್ನಿಗೆ ವಿಷ ನೀಡಿ ಕೊಲ್ಲಲು ಯತ್ನಿಸಿದ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳು, ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆಯ ಚಾರ್ಸಾಲಿನ ಸೌಪರ್ಣಿಕಾ ನದಿಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆಪ್ಟೆಂಬರ್ 29ರಂದು ಬೆಳಕಿಗೆ ಬಂದಿದೆ.
ಮೃತರನ್ನು ವಿಠಲ ನಾಯ್ಕ (35) ಮತ್ತು ಭವ್ಯಾ ಯಾನೆ ನಿಶ್ಮಿತಾ (33) ಎಂದು ಗುರುತಿಸಲಾಗಿದೆ. ಇವರಿಬ್ಬರ ವಿರುದ್ಧ ಸೆಪ್ಟೆಂಬರ್ 11 ರಂದು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿತ್ತು.
ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಾಯ್ದೆಯ ಸೆಕ್ಷನ್ 123, 109 ಮತ್ತು 3(5) ರ ಅಡಿಯಲ್ಲಿ ಗಂಭೀರ ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಪ್ರಕರಣದ ಹಿನ್ನೆಲೆ:
ವಿಠಲ ನಾಯ್ಕನು ತನ್ನ ಪತ್ನಿಗೆ ಇಂಜೆಕ್ಷನ್ ಮೂಲಕ ವಿಷ ನೀಡಿ ಕೊಲೆ ಮಾಡಲು ಯತ್ನಿಸಿದ್ದನು. ಈ ಕೃತ್ಯದಲ್ಲಿ ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಭವ್ಯಾ ಕೂಡ ಭಾಗಿಯಾಗಿದ್ದಳು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ತನಿಖೆ ನಡೆಯುತ್ತಿತ್ತು.
ನದಿಯ ದಂಡೆಯ ಬಳಿ ಇಬ್ಬರ ಮೃತದೇಹಗಳು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇಬ್ಬರು ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಕ್ರೈಮ್ ಆಫೀಸರ್ (SOCO) ಮತ್ತು ವಿಧಿವಿಜ್ಞಾನ (ಫೊರೆನ್ಸಿಕ್) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೈಂದೂರು ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…