ಕುಂದಾಪುರ: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ಪತಿ ನೇಣು ಹಾಕಿಕೊಂಡ ಘಟನೆ ಕುಂದಾಪುರ ಗೋಳಿಯಂಗಡಿ ಸಮೀದ ಬೆಳ್ವೆ ಗ್ರಾಮದ ಸೆಟ್ ವಳ್ಳಿ ಎಂಬಲ್ಲಿ ಬುಧವಾರ ನಡೆದಿದ್ದು ರಾತ್ರಿ ವೇಳೆ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿ ಸೂರ್ಯನಾರಾಯಣ ಭಟ್ (50) ಎಂಬಾತ ಪತ್ನಿ, ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡರೆ, ಆತನ ಪತ್ನಿ ಮಾನಸಿ (40) ಸುಧೀಂದ್ರ (14) ಸುಧೀಶ್ (8) ಎಂಬುವರೇ ಹತ್ಯೆಯಾದವರು.
ಕೃಷಿಕರಾಗಿದ್ದ ಸೂರ್ಯನಾರಾಯಣ ಭಟ್ ಬಿಡುವಿನ ವೇಳೆಯಲ್ಲಿ ಅಡುಗೆ ಕೆಲಸಕ್ಕೆ ಹೋಗುತ್ತಿದ್ದರು. ಬುಧವಾರ ಸಂಜೆ ಅಡುಗೆ ಕೆಲಸಕ್ಕೆ ಹೋಗುವುದಾಗಿ ಒಪ್ಪಿಕೊಂಡಿದ್ದರು. ಆದರೆ ಹೋಗದೇ ಇದ್ದಾಗ ಅಡುಗೆಯವರು ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಪ್ ಬಂದಿದ್ದು, ಪತ್ನಿಯ ಫೊನ್ ಸ್ವಿಚ್ ಆಪ್ ಆಗಿತ್ತು ಬಳಿಕ ಅವರ ಅಣ್ಣನಿಗೆ ಕರೆ ಮಾಡಿದ್ದು ಸಹೋದರ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಬುಧವಾರ ನಸುಕಿನಲ್ಲಿಯೇ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದ್ದು, ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿದ ಬಳಿಕ ತಲೆಗೆ ಹರಿತವಾದ ಆಯುಧದಿಂದ ಚುಚ್ಚಿ ಕೊಲ್ಲಲಾಗಿದೆ ಎಂದು ಶಂಕಿಸಲಾಗಿದ್ದು ತಲೆಯಲ್ಲಿ ಚುಚ್ಚಿ ಗಾಯಗಳಿವೆ. ಬಳಿಕ ಈತ ಮನೆಯೊಳಗೆ ಚಿಕ ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿದ ಬಳಿಕ ತಲೆಗೆ ಹರಿತವಾದ ಆಯುಧದಿಂದ ಚುಚ್ಚಿ ಕೊಲ್ಲಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಗ ಸುಧೀಂದ್ರ ಹೆಬ್ರಿಯ ಎಸ್ ಆರ್ ಎಸ್ ಶಾಲೆಯಲ್ಲಿ ಎಂಟನೇ ತರಗತಿ ಹಾಗೂ ಸುಧೀಶ್ ಅದೇ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ.ಇವರ ಸಹೋದರ ಒಬ್ಬ ಬೆಂಗಳೂರಿನಲ್ಲಿದ್ದು, ಮತ್ತೊಬ್ಬ ಊರಿನಲ್ಲಿಯೇ ಕೃಷಿ ಕೆಲಸ ಮಾಡಿಕೊಂಡಿದ್ದಾರೆ. ಸಹೋದರಿ ಶಿಕ್ಷಕಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ನಿಶಾ ಜೇಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಣಿಪಾಲದ ವಿಧಿ ವಿಜ್ಞಾನ ತಜ್ಞರು, ಶ್ವಾನ ದಳ, ಬೆರಳಚ್ಚು ತಜ್ಞರು ಪರೀಕ್ಷಿಸಿದ ಬಳಿಕ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಮೃತದೇಹಗಳನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…