Featured

ಕುಂದಾಪುರ: ಪತ್ನಿ, ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಪತಿ -Vishwanews24

ಕುಂದಾಪುರ: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ಪತಿ ನೇಣು ಹಾಕಿಕೊಂಡ ಘಟನೆ ಕುಂದಾಪುರ ಗೋಳಿಯಂಗಡಿ ಸಮೀದ ಬೆಳ್ವೆ ಗ್ರಾಮದ ಸೆಟ್ ವಳ್ಳಿ ಎಂಬಲ್ಲಿ ಬುಧವಾರ ನಡೆದಿದ್ದು ರಾತ್ರಿ ವೇಳೆ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿ ಸೂರ್ಯನಾರಾಯಣ ಭಟ್ (50) ಎಂಬಾತ ಪತ್ನಿ, ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡರೆ, ಆತನ ಪತ್ನಿ ಮಾನಸಿ (40) ಸುಧೀಂದ್ರ (14) ಸುಧೀಶ್ (8) ಎಂಬುವರೇ ಹತ್ಯೆಯಾದವರು.

ಕೃಷಿಕರಾಗಿದ್ದ ಸೂರ್ಯನಾರಾಯಣ ಭಟ್ ಬಿಡುವಿನ ವೇಳೆಯಲ್ಲಿ ಅಡುಗೆ ಕೆಲಸಕ್ಕೆ ಹೋಗುತ್ತಿದ್ದರು. ಬುಧವಾರ ಸಂಜೆ ಅಡುಗೆ ಕೆಲಸಕ್ಕೆ ಹೋಗುವುದಾಗಿ ಒಪ್ಪಿಕೊಂಡಿದ್ದರು. ಆದರೆ ಹೋಗದೇ ಇದ್ದಾಗ ಅಡುಗೆಯವರು ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಪ್ ಬಂದಿದ್ದು, ಪತ್ನಿಯ ಫೊನ್ ಸ್ವಿಚ್ ಆಪ್ ಆಗಿತ್ತು ಬಳಿಕ ಅವರ ಅಣ್ಣನಿಗೆ ಕರೆ ಮಾಡಿದ್ದು ಸಹೋದರ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಬುಧವಾರ ನಸುಕಿನಲ್ಲಿಯೇ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದ್ದು, ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿದ ಬಳಿಕ ತಲೆಗೆ ಹರಿತವಾದ ಆಯುಧದಿಂದ ಚುಚ್ಚಿ ಕೊಲ್ಲಲಾಗಿದೆ ಎಂದು ಶಂಕಿಸಲಾಗಿದ್ದು ತಲೆಯಲ್ಲಿ ಚುಚ್ಚಿ ಗಾಯಗಳಿವೆ. ಬಳಿಕ ಈತ ಮನೆಯೊಳಗೆ ಚಿಕ ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿದ ಬಳಿಕ ತಲೆಗೆ ಹರಿತವಾದ ಆಯುಧದಿಂದ ಚುಚ್ಚಿ ಕೊಲ್ಲಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಗ ಸುಧೀಂದ್ರ ಹೆಬ್ರಿಯ ಎಸ್ ಆರ್ ಎಸ್ ಶಾಲೆಯಲ್ಲಿ ಎಂಟನೇ ತರಗತಿ ಹಾಗೂ ಸುಧೀಶ್ ಅದೇ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ.ಇವರ ಸಹೋದರ ಒಬ್ಬ ಬೆಂಗಳೂರಿನಲ್ಲಿದ್ದು, ಮತ್ತೊಬ್ಬ ಊರಿನಲ್ಲಿಯೇ ಕೃಷಿ ಕೆಲಸ ಮಾಡಿಕೊಂಡಿದ್ದಾರೆ. ಸಹೋದರಿ ಶಿಕ್ಷಕಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ನಿಶಾ ಜೇಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಣಿಪಾಲದ ವಿಧಿ ವಿಜ್ಞಾನ ತಜ್ಞರು, ಶ್ವಾನ ದಳ, ಬೆರಳಚ್ಚು ತಜ್ಞರು ಪರೀಕ್ಷಿಸಿದ ಬಳಿಕ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಮೃತದೇಹಗಳನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 minutes ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

20 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago