ಕುಂದಾಪುರ: ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವೇಳೆ ಶಂಕರನಾರಾಯಣ ಪೊಲೀಸ್ ಠಾಣೆಯ ಸಿಬಂದಿಗಳು ಯಡಮಕ್ಕಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಐದು ಗಂಡು ಕರುಗಳನ್ನು ರಕ್ಷಣೆ ಮಾಡುವುದರೊಂದಿಗೆ ಒರ್ವನನ್ನು ಬಂಧಿಸಿದ್ದಾರೆ.
ಬಂಧಿತನನ್ನು ನಾಗರಾಜ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಇನ್ನೋರ್ವ ಪರಾರಿಯಾಗಿದ್ದಾನೆ. ಆರೋಪಿ ನಾಗರಾಜನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಗಳು ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಹೊಂದದೇ 5 ಗಂಡು ದನದ ಕರುಗಳನ್ನು ಕಳವು ಮಾಡಿಕೊಂಡು ಅವುಗಳಿಗೆ ಮೇವು, ಬಾಯಾರಿಕೆ ನೀಡದೆ ಹಿಂಸಾತ್ಮಕವಾಗಿ ಪಿಕಪ್ ವಾಹನದಲ್ಲಿ ತುಂಬಿಸಿ ವಧೆ ಮಾಡಲು ಕುಂದಾಪುರ ತಾಲೂಕಿನ ಶಂಕರನಾರಾಯಣ ಯಡಮಕ್ಕಿ ಕ್ರಾಸ್ ಬಳಿ ಸಾಗಾಟ ಮಾಡುತ್ತಿದ್ದಾಗ ಶಂಕರನಾರಾಯಣ ಪಿಎಸ್ಐ ಶ್ರೀಧರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…