Featured

ಕುಂದಾಪುರ: ಪಿಕಪ್ ವಾಹನ ಹಾಗೂ ಬೈಕ್ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು – Vishwanews24

ಕುಂದಾಪುರ: ಪಿಕಪ್ ವಾಹನ ಹಾಗೂ ಬೈಕ್ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಕುಂದಾಪುರ : ಪಿಕಪ್ ವಾಹನ ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಡೂರು- ಕುಂಜ್ಞಾಡಿ ಗ್ರಾಮದ ಜನ್ನಾಲ್‌ ಮೇಲ್‌ಜಡ್ಡು ಸಮೀಪ ಸೋಮವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಹಾರ್ಮಣ್ ನಿವಾಸಿ ಪ್ರಜ್ವಲ್ ಶೆಟ್ಟಿ (26) ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಪ್ರಜ್ವಲ್ ಶೆಟ್ಟಿ ಬೇರೆಯವರ ತೋಟದ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ‌ ಸೋಮವಾರ ಸಂಜೆ ಸುಮಾರು 5 ಗಂಟೆಗೆ ತೋಟದ ಕೆಲಸ ಮುಗಿಸಿ ತನ್ನ ಶೈನ್ ಬೈಕಿನಲ್ಲಿ ಹಾರ್ಮಣ್ ಕಡೆಗೆ ಪ್ರಯಾಣಿಸುತ್ತಿದ್ದ. ಇದೇ ಸಂದರ್ಭ ಯತೀಶ್ ಎಂಬಾತ ಪಿಕಪ್ ವಾಹನವನ್ನು ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಇಡೂರು- ಕುಂಜ್ಞಾಡಿ ಗ್ರಾಮದ ಜನ್ನಾಲ್‌ ಮೇಲ್‌ಜಡ್ಡು ಸಮೀಪ ಕೊಲ್ಲೂರು ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ.

ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಪ್ರಜ್ವಲ್ ಶೆಟ್ಟಿಯ ಹೆಲ್ಮೆಟ್ ಹಾರಿ ಹೋಗಿದ್ದು, ತಲೆ ರಸ್ತೆಗಪ್ಪಳಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಥಳೀಯರಾದ ಹೊಸೂರು ಸುಂದರ್ ಶೆಟ್ಟಿ ಹಾಗೂ ಇತರರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

5 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

6 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

6 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

8 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

8 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago