ಕುಂದಾಪುರ : ಪಿಕಪ್ ವಾಹನ ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಡೂರು- ಕುಂಜ್ಞಾಡಿ ಗ್ರಾಮದ ಜನ್ನಾಲ್ ಮೇಲ್ಜಡ್ಡು ಸಮೀಪ ಸೋಮವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಹಾರ್ಮಣ್ ನಿವಾಸಿ ಪ್ರಜ್ವಲ್ ಶೆಟ್ಟಿ (26) ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಪ್ರಜ್ವಲ್ ಶೆಟ್ಟಿ ಬೇರೆಯವರ ತೋಟದ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಸೋಮವಾರ ಸಂಜೆ ಸುಮಾರು 5 ಗಂಟೆಗೆ ತೋಟದ ಕೆಲಸ ಮುಗಿಸಿ ತನ್ನ ಶೈನ್ ಬೈಕಿನಲ್ಲಿ ಹಾರ್ಮಣ್ ಕಡೆಗೆ ಪ್ರಯಾಣಿಸುತ್ತಿದ್ದ. ಇದೇ ಸಂದರ್ಭ ಯತೀಶ್ ಎಂಬಾತ ಪಿಕಪ್ ವಾಹನವನ್ನು ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಇಡೂರು- ಕುಂಜ್ಞಾಡಿ ಗ್ರಾಮದ ಜನ್ನಾಲ್ ಮೇಲ್ಜಡ್ಡು ಸಮೀಪ ಕೊಲ್ಲೂರು ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಪ್ರಜ್ವಲ್ ಶೆಟ್ಟಿಯ ಹೆಲ್ಮೆಟ್ ಹಾರಿ ಹೋಗಿದ್ದು, ತಲೆ ರಸ್ತೆಗಪ್ಪಳಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಥಳೀಯರಾದ ಹೊಸೂರು ಸುಂದರ್ ಶೆಟ್ಟಿ ಹಾಗೂ ಇತರರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…