ಕುಂದಾಪುರ: ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯನ್ನು ಹೆದರಿಸಲು ಅಶ್ಲೀಲ ಫೋಟೋವನ್ನು ತೆಗೆದ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ ಗ್ರಾಮದ ನಿವಾಸಿ ಶ್ರೇಯಾ ನಾಯ್ಕ ಅತ್ಯಾಚಾರವೆಸಗಿದ ಆರೋಪಿ. ಆತ ಒಂದು ವರ್ಷದ ಹಿಂದೆ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದಾನೆ. ಪ್ರೀತಿಯ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿದ್ದಾನೆ.
ಒಂದು ವರ್ಷದ ಹಿಂದೆ ಆಕೆಯನ್ನು ಪುಸಲಾಯಿಸಿ ಕಾರಿನಲ್ಲಿ ಕಾಡಿನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಕಾರಿನಲ್ಲೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಹೀಗೆ ನಿರಂತರವಾಗಿ ಆತ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಾ ದೈಹಿಕ ತೀಟೆಯನ್ನು ತೀರಿಸಿಕೊಂಡಿದ್ದಾನೆ. ಆತ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ಫೋಟೋ ತೆಗೆದಿರಿಸಿಕೊಂಡು ಆಕೆಗೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…