ಕುಂದಾಪುರ: ಸದ್ಯ ಲೋಕಸಭಾ ಚುನಾವಣೆಯ ಬಿಸಿ ಗರಿಗೆದರುತ್ತಿರುವಂತೆ ಬಿಜೆಪಿ ಆಕಾಂಕ್ಷಿಗಳ ಪಟ್ಟಿಯು ಬೆಳೆಯುತ್ತಿದೆ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಆಕಾಂಕ್ಷಿಗಳಾಗಿ ಈಗಾಗಲೇ ಐದು ಮಂದಿಯ ಹೆಸರು ಮುಂಚೂಣಿಯಲ್ಲಿದ್ದು ಈ ಪೈಕಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿಯೊಂದಿಗೆ ಸ್ಪರ್ಧೆ ಮಾಡಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೂಡ ರೇಸ್ ನಲ್ಲಿ ಮುಂದೆ ಇದ್ದಾರೆ.
ಈಗಾಗಲೇ ತನ್ನ ಕಾರ್ಯಚಟುವಟಿಕೆಯನ್ನ ಬಿರುಸು ಮಾಡಿರುವ ಪ್ರಮೋದ್ ಮದ್ವರಾಜ್ ಮಾಜಿ ಹಾಲಿ ಶಾಸಕರನ್ನು ಸಂಪರ್ಕಿಸುವ ಕೆಲಸ ಮಾಡಿದ್ದಾರೆಂದು ತಿಳಿದು ಬಂದಿದೆ.
ಕಳೆದೆರಡು ದಿನಗಳ ಹಿಂದೆ ಹಾಲಾಡಿ ಶ್ರೀನಿವಾಸ್ ಶೆಟ್ಟಿಯನ್ನು ಭೇಟಿ ಮಾಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೇಳಿಕೊಂಡಿದ್ದು ಇದಕ್ಕೆ ಸಹಮತ ಸೂಚಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಈ ನಡುವೆ ಉಡುಪಿ ಜಿಲ್ಲೆಯ ಪಂಚಪಾಂಡವರಂತಿರುವ ಶಾಸಕರುಗಳ ಪೈಕಿ ಕುಂದಾಪುರ ಹೊರತುಪಡಿಸಿ ಉಳಿದ ನಾಲ್ಕು ಶಾಸಕರ ನಿಲುವಿನ ಬಗ್ಗೆ ಕಾದು ನೋಡಬೇಕಾಗಿದೆ.
ಪ್ರಮೋದ್ ಮಧ್ವರಾಜ್ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಕಸರತ್ತು ನಡೆಸಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…