Featured

ಕುಂದಾಪುರ ಪ್ಲೈಓವರ್ ಮೇಲೆ  ವಿದ್ಯುತ್ ಪ್ರವಾಹ : ವಿಡಿಯೋ ವೈರಲ್ – Vishwanews24

ಕುಂದಾಪುರ ಪ್ಲೈಓವರ್ ಮೇಲೆ  ವಿದ್ಯುತ್ ಪ್ರವಾಹ : ವಿಡಿಯೋ ವೈರಲ್

ಕುಂದಾಪುರ : ಕಳೆದ‌ ಮೂರು ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ, ಹೆದ್ದಾರಿಯಲ್ಲಿನ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸಿರುವುದನ್ನು ಟೆಸ್ಟರ್ ಮೂಲಕ ತೋರಿಸಿದ ವಿಡಿಯೋವೊಂದು ವೈರಲ್ ಆಗಿ ಆತಂಕಕ್ಕೆಡೆಮಾಡಿಕೊಟ್ಟ ಘಟನೆ ಕುಂದಾಪುರದ ಹೃದಯಭಾಗದಲ್ಲಿರುವ ಫ್ಲೈ ಓವರ್ ನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಇಬ್ಬರು ವ್ಯಕ್ತಿಗಳು ಈ ಪ್ರಾತ್ಯಕ್ಷಿಕೆ ಮಾಡಿ, ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ನವಯುಗ ಕನ್ ಸ್ಟ್ರಕ್ಷನ್ ನವರು ಹಲವಾರು ಸಮಸ್ಯೆಗಳ ನಡುವೆಯೇ ಫ್ಲೈ ಓವರ್ ನಿರ್ಮಿಸಿದ್ದರೂ ರಸ್ತೆ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಳಿಕವೂ ದಾರಿದೀಪಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರಲಿಲ್ಲ. ಸಾರ್ವಜನಿಕರ ಹೋರಾಟದ ಬಳಿಕ ತರಾತುರಿಯಲ್ಲಿ ನಾಲ್ಕು ತಿಂಗಳ ಹಿಂದಷ್ಟೇ ವಿದ್ಯುತ್ ಸಂಪರ್ಕ ನೀಡಲಾಗಿತ್ತು.

ಇದೀಗ ವಿದ್ಯುತ್ ಸಂಪರ್ಕದಲ್ಲಿನ ಸಮಸ್ಯೆಯಿಂದಾಗಿ ಫ್ಲೈ ಓವರ್ ಮೇಲೆ ವಿದ್ಯುತ್ ಪ್ರವಹಿಸುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಹೆಚ್ಚಿನ ಅನಾಹುತ ಸಂಭವಿಸುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತಕ್ಷಣ ಗಮನಹರಿಸಿ, ಸಮಸ್ಯೆ ಪರಿಹರಿಸಬೇಕಾಗಿದೆ.

ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ – Vishwanews24

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago